
ಕೆ. ಎಮ್.ಇ.ಎಸ್ ವಿದ್ಯಾ ಸಂಸ್ಥೆಯಲ್ಲಿ ಪ್ರಾರ್ಥಮಿಕ ಪೂರ್ವ ವಿಭಾಗದ ಪೋಷಕರಿಗೆ “ಮಿನಿ ಒಲಂಪಿಕ್ಸ್” ಎಂಬ ಕ್ರೀಡಾ ಸ್ಪರ್ಧೆಯನ್ನು ಆಯೋಜಿಸಲಾಯಿತು.
ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ “ಫ್ರೆಂಡ್ಸ್ ಪವರ್ ಜಿಮ್ ಅಂಡ್ ಲೇಡೀಸ್ ಫಿಟ್ನೆಸ್ ಹೌಸ್ ಜೋಡಿರಸ್ತೆ” ಸಂಸ್ಥೆಯ ನಿರ್ದೇಶಕ ಮೊಹಮ್ಮದ್ ಅಲಿ ಅವರು ‘ಇಂತಹ ಕಾರ್ಯಕ್ರಮಗಳನ್ನು ವಿದ್ಯಾಸಂಸ್ಥೆಗಳಲ್ಲಿ ಆಯೋಜಿಸುವುದರಿಂದ ಮಕ್ಕಳಲ್ಲಿ ಚಿಕ್ಕ ವಯಸ್ಸಿನಿಂದಲೇ ಕ್ರೀಡಾಮನೋಭಾವ ಬೆಳೆಯಲು ಸಹಕಾರಿಯಾಗುತ್ತದೆ’ ಎಂದರು.
ಅಂತೆಯೇ ಮತ್ತೋರ್ವ ಅತಿಥಿಯಾಗಿ ಆಗಮಿಸಿದ ಆಲ್ವಿನ್ ಸೌಂಡ್ಸ್ ಅಂಡ್ ಡೆಕೋರೇಷನ್ ನಕ್ರೆ ಇದರ ಮಾಲಕರಾದ ಶ್ರೀಮತಿ ಜಸಿಂತ ಡಿ ಅಲ್ಮೆಡ ಇವರು ” ಈಗಿನ ಬಿಡುವಿಲ್ಲದ ಸಮಯದಲ್ಲೂ ಆಟ-ಪಾಠಗಳಲ್ಲಿ ಮಕ್ಕಳನ್ನು ಪ್ರೋತ್ಸಾಹಿಸಿ ಅವರ ಯಶಸ್ಸಿನಲ್ಲಿಯೇ ಸಂತಸ ಪಡುವ ಪಾಲಕರು ಸ್ವತಃ ಕ್ರೀಡೆಗಳಲ್ಲಿ ಪಾಲ್ಗೊಂಡು ಕ್ರೀಡಾ ಸ್ಫೂರ್ತಿಯೊಂದಿಗೆ ಸಂಭ್ರಮಿಸಿದ ಕ್ಷಣ ಇಂದಿನದಾಗಿದೆ” ಎಂದರು.
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಕೆ. ಬಾಲಕೃಷ್ಣ ರಾವ್, ಪ್ರೌಢ ವಿಭಾಗದ ಮುಖ್ಯೋಪಾಧ್ಯಾಯನಿಯಾದ ಶ್ರೀಮತಿ ಪಾಟ್ಕರ್, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿಯಾದ ಶ್ರೀಮತಿ ಲೊಲಿಟ.ಡಿ. ಸಿಲ್ವ ಹಾಗೂ ಶಿಕ್ಷಕರು, ಶಿಕ್ಷಕೇತರ ವರ್ಗದವರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿದರು.
ಈ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪಾಲಕರಿಗಾಗಿ ವಿವಿಧ ರೀತಿಯ ಆಟಗಳನ್ನು ಏರ್ಪಡಿಸಿದ್ದು, ಪಾಲಕರು ಉತ್ಸಾಹದಿಂದ ಪಾಲ್ಗೊಂಡು ಮನರಂಜನೆಯೊಂದಿಗೆ ಮಕ್ಕಳಿಗೆ ಸ್ಫೂರ್ತಿಯಾದರು.




