
ಸಾಣೂರಿನಲ್ಲಿ ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಖಾಸಗಿ ಬಸ್ಸೊಂದು ಗುದ್ದಿದ ಪರಿಣಾಮ ಗಾಯಾಳು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಗಾಯಾಳುವನ್ನು ಇರ್ವತ್ತೂರು ಗ್ರಾಮ ನಿವಾಸಿ ನಂದಾ ಅತಿಕಾರಿ ಎಂದು ಗುರ್ತಿಸಲಾಗಿದ್ದು, ಇವರು ಮಂಗಳೂರಿನಿಂದ ಬಂದ ಬಸ್ಸಿಳಿದು, ರಸ್ತೆ ದಾಟಲು ನಿಂತಿದ್ದ ವೇಳೆ ದುರ್ಘಟನೆ ನಡೆದಿದೆ. ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಾಳು ನೀಡಿದ ದೂರಿನ ಅನ್ವಯ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಹೀರಾತು




