Home ಕಾರ್ಕಳ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : “ಹೊಂಗನಸು” ವಿಶೇಷ ಕಾರ್ಯಕ್ರಮ ಪ್ರತಿಯೊಂದು ಸಮಸ್ಯೆಯನ್ನು ಜಾಣ್ಮೆಯಿಂದ...

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : “ಹೊಂಗನಸು” ವಿಶೇಷ ಕಾರ್ಯಕ್ರಮ ಪ್ರತಿಯೊಂದು ಸಮಸ್ಯೆಯನ್ನು ಜಾಣ್ಮೆಯಿಂದ ಪರಿಹರಿಸುವವನೇ ನಿಜವಾದ ನಾಯಕ – ಸಂಧ್ಯಾ ಶೆಟ್ಟಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಜನ ಸಾಮಾನ್ಯರ ಸಂಘ-ಹರಿಣಿ ಪೂಜಾರಿ

0

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : “ಹೊಂಗನಸು” ವಿಶೇಷ ಕಾರ್ಯಕ್ರಮ

ಪ್ರತಿಯೊಂದು ಸಮಸ್ಯೆಯನ್ನು ಜಾಣ್ಮೆಯಿಂದ ಪರಿಹರಿಸುವವನೇ ನಿಜವಾದ ನಾಯಕ – ಸಂಧ್ಯಾ ಶೆಟ್ಟಿ

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಜನ ಸಾಮಾನ್ಯರ ಸಂಘ-ಹರಿಣಿ ಪೂಜಾರಿ

ಪ್ರತಿಯೊಂದು ಸಮಸ್ಯೆಯನ್ನು ಜಾಣ್ಮೆಯಿಂದ ಪರಿಹರಿಸುವವನೇ ನಿಜವಾದ ನಾಯಕ, ನಾಯಕತ್ವ ಕೇವಲ ಒಂದು ಹುದ್ದೆಯಲ್ಲ ಅದೊಂದು ಜವಾಬ್ದಾರಿ. ಎಲ್ಲರನ್ನೂ ಸೇರಿಸಿಕೊಂಡು ಮುನ್ನಡೆಯಬಲ್ಲ ಚಾಣಾಕ್ಷನೇ ನಿಜವಾದ ನಾಯಕ ಎಂಬುದನ್ನು ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ನಮಗೆ ಕಲಿಸಿಕೊಟ್ಟಿದೆ ಎಂದು ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ಮಾಜಿ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ ಮನದಾಳದ ಮಾತುಗಳ ಮೂಲಕ ಹೇಳಿದರು.

ಪ್ರತಿ ಬಾರಿ ಹೊಸತನದ ಯೋಜನೆ ಹಾಗೂ ಹೊಸ ಕಾರ್ಯಕ್ರಮಗಳ ಮೂಲಕ ಸಂಘಟನೆಯನ್ನು ಬೆಳೆಸಬಲ್ಲ ವ್ಯಕ್ತಿಯೇ ನಿಜವಾದ ನಾಯಕ, ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಎನ್ನುವುದು ಜನ ಸಾಮಾನ್ಯರ ಸಂಘ ಇಲ್ಲಿ ಎಲ್ಲರಿಗೂ ಮುಕ್ತ ಅವಕಾಶಗಳ ತೆರೆದಿದೆ ಎಂದು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಸದಸ್ಯರಾದ ಹರಿಣಿ ಪೂಜಾರಿ ಮನದಾಳದ ಮಾತುಗಳ ಮೂಲಕ ಹೇಳಿದರು.

ರಾಜ್ಯ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಕುಂಟಲಗುಂಡಿಯಲ್ಲಿರುವ ಸಂಘದ ರಂಗಮAದಿರದಲ್ಲಿ ಆದಿತ್ಯವಾರ ಜರಗಿದ 26ನೇ ವರ್ಷದ ವರ್ಷಾಚರಣೆಯ ಪ್ರಯುಕ್ತ ಜರಗಿದ “ಹೊಂಗನಸು” ವಿಶೇಷ ಕಾರ್ಯಕ್ರಮದಲ್ಲಿ ಮನದಾಳದ ಮಾತು ಮೂಲಕ ಮಾತನಾಡಿದರು.

ಸಂಘದ ಅಧ್ಯಕ್ಷರಾದ ಸುರೇಶ್ ಅಬ್ಬನಡ್ಕ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ನಿಕಟ ಪೂರ್ವಾಧ್ಯಕ್ಷ ದಿನೇಶ್ ಪೂಜಾರಿ ಬೀರೊಟ್ಟು, ಕಾರ್ಯದರ್ಶಿ ಸತೀಶ್ ಅಬ್ಬನಡ್ಕ, ಮಹಿಳಾ ಸಂಘಟನಾ ಕಾರ್ಯದರ್ಶಿ ಸುಲೋಚನಾ ಕೋಟ್ಯಾನ್ ಮೊದಲಾದವರು ವೇದಿಕೆಯಲ್ಲಿದ್ದರು.

ಈ ಸಂದರ್ಭದಲ್ಲಿ ಪೂರ್ವಾಧ್ಯಕ್ಷರಾದ ಆನಂದ ಪೂಜಾರಿ, ಸುರೇಶ್ ಕಾಸರಬೈಲು, ರಾಜೇಶ್ ಕೋಟ್ಯಾನ್, ಪ್ರಶಾಂತ್ ಪೂಜಾರಿ, ಕೋಶಾಧಿಕಾರಿ ಪ್ರದೀಪ್ ಸುವರ್ಣ, ಸದಸ್ಯರಾದ ಲಲಿತಾ ಆಚಾರ್ಯ, ಲೀಲಾ ಪೂಜಾರಿ, ಪದ್ಮಶ್ರೀ ಪೂಜಾರಿ, ವೀಣಾ ಪೂಜಾರಿ, ಪುಷ್ಪ ಕುಲಾಲ್, ಹರೀಶ್ ಗೋಳಿಕಟ್ಟೆ, ಹರಿಣಾಕ್ಷಿ ಪೂಜಾರಿ, ಅನ್ನಪೂರ್ಣ ಕಾಮತ್, ಶಾಂತರಾಮ್ ಕುಲಾಲ್, ಯೋಗೀಶ್ ಆಚಾರ್ಯ, ಸುಭಾಸ್ ಕೆಮ್ಮಣ್ಣು, ಕಿರಣ್ ಪೂಜಾರಿ, ಶ್ರೀಕಾಂತ್ ಆಚಾರ್ಯ, ಅಭಿಷೇಕ್ ಕುಲಾಲ್, ಅವಿನಾಶ್ ಪೂಜಾರಿ, ಯಶವಂತ್ ಕುಲಾಲ್ ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತಿತರಿದ್ದರು.

ಜಾಹೀರಾತು

NO COMMENTS

LEAVE A REPLY

Please enter your comment!
Please enter your name here