
ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಕಾರ್ಯಕ್ರಮದನ್ವಯ, ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಆಶ್ರಯದಲ್ಲಿ, ‘ಜೈ ಬಾಪೂ-ಜೈ ಭೀಮ್-ಜೈ ಸಂವಿಧಾನ _ ಕಾರ್ಯಕ್ರಮವು, ದಿನಾಂಕ – 02/12/2025 ಮಂಗಳವಾರದಂದು, ಬೆಳಿಗ್ಗೆ ಗಂಟೆ – 10.30 ಕ್ಕೆ, ಉಡುಪಿ – ಪುರಭವನದಲ್ಲಿ ಸಭಾಂಗಣ ದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ,ಕೆ.ಪಿ.ಸಿ.ಸಿ ಪ್ರಚಾರ ಸಮಿತಿಯ ಉಪಾಧ್ಯಕ್ಷರುಗಳಾದ ಕಿಮ್ಮನೆ ರತ್ನಾಕರ್, ಅಬ್ದುಲ್ ಮುನೀರ್ ಜನ್ಸಾಲೆ, ಕೆ.ಪಿ.ಸಿ.ಸಿ ಮಾಧ್ಯಮ ವಕ್ತಾರರಾದ ಸುಧೀರ್ ಕುಮಾರ್ ಮುರೊಳ್ಳಿ ಮತ್ತು ಖ್ಯಾತ ಕನ್ನಡ ಚಲನಚಿತ್ರ ನಟ, ನಿರ್ದೇಶಕ, ನಿರ್ಮಾಪಕರಾದ ಎಸ್. ನಾರಾಯಣ್ ರವರು ಭಾಗವಹಿಸುತ್ತಿದ್ದಾರೆ.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ವಿನಯ ಕುಮಾರ್ ಸೊರಕೆ, ಕೆಪಿಸಿಸಿ ಕಾರ್ಯಧ್ಯಕ್ಷ ಹಾಗು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಹಿರಿಯ ಕಾಂಗ್ರೆಸ್ ನಾಯಕರಾದ ಮಾಜಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ,ಮಾಜಿ ಸಚಿವ ಜಯ ಪ್ರಕಾಶ್ ಹೆಗ್ಡೆ, ಮಾಜಿ ಶಾಸಕ ಗೋಪಾಲ ಪೂಜಾರಿ, ಮಾಜಿ ಶಾಸಕ ಸುಕುಮಾರ್ ಶೆಟ್ಟಿ,ಕೆಪಿಸಿಸಿ ಉಪಾಧ್ಯಕ್ಷ ಹಾಗು ಕರಾವಳಿ ಅಭಿವೃಧ್ಧಿ ಮಂಡಳಿ ಅಧ್ಯಕ್ಷ ಎಂ. ಎ ಗಫೂರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಉಡುಪಿ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ನಾರಾಯಣ ಗುರು ಅಭಿವೃಧ್ಧಿ ನಿಗಮದ ಅಧ್ಯಕ್ಷ ಮಂಜುನಾಥ್ ಪೂಜಾರಿ ಮುದ್ರಾಡಿ, ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೇಲಿಯೋ, ಉದಯ ಕುಮಾರ್ ಶೆಟ್ಟಿ ಮುನಿಯಾಲು, ಪ್ರಸಾದ್ ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ರಾಜು ಪೂಜಾರಿ, ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಜ್ಯೋತಿ ಹೆಬ್ಬಾರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಧ್ಯಕ್ಷ ಕಿಶನ್ ಹೆಗ್ಡೆ, ಏಳು ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರು, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರು ,ಉಪಾಧ್ಯಕ್ಷರು ಸದಸ್ಯರು, ಪಕ್ಷದ ಜಿಲ್ಲೆಯ ಎಲ್ಲ ನಾಯಕರು, ಜಿಲ್ಲೆಯ ಎಲ್ಲಾ ಮುಖಂಡರು, ಐದು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಉಭಯ ಬ್ಲಾಕ್ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎನ್. ಎಸ್. ಯು. ಐ, ಇಂಟಕ್, ಕಿಸಾನ್ ಕಾಂಗ್ರೆಸ್, ಅಲ್ಪಸಂಖ್ಯಾತರ ಘಟಕ, ಹಿಂದುಳಿದ ವರ್ಗಗಳ ಘಟಕ, ಎಸ್. ಸಿ / ಎಸ್. ಟಿ ಘಟಕ, ಸಾಮಾಜಿಕ ಜಾಲತಾಣ ಘಟಕ, ಕಾಂಗ್ರೆಸ್ ಮೀನುಗಾರರ ಘಟಕ, ಇನ್ನಿತರ ವಿವಿಧ ಘಟಕ / ಸಮಿತಿ / ವಿಭಾಗ ಗಳ ಅಧ್ಯಕ್ಷರು / ಪದಾಧಿಕಾರಿಗಳು, ಜಿಲ್ಲೆಯ ಎಲ್ಲ ಘಟಕದ ಅಧ್ಯಕ್ಷರು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರ ಹಾಗು ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು,ಗ್ರಾಮೀಣ ಕಾಂಗ್ರೆಸ್ ಮತ್ತು ಬೂತ್ ಸಮಿತಿಗಳ ಅಧ್ಯಕ್ಷರು /ಪದಾಧಿಕಾರಿಗಳು, ಬಿ. ಎಲ್. ಎ -2 ಗಳು, ವಿವಿಧ ಸ್ತರದ ಸ್ಥಳೀಯಾಡಳಿತ ಸಂಸ್ಥೆಗಳ ಹಾಲಿ ಹಾಗೂ ಮಾಜಿ ಸದಸ್ಯರುಗಳು ಭಾಗವಹಿಸಲಿದ್ದಾರೆ.
ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ ಮತ್ತು ಉಪಾಧ್ಯಕ್ಷ ದಿನಕರ ಶೆಟ್ಟಿ ಜಂಟಿಯಾಗಿ ಮನವಿ ಮಾಡಿದ್ದಾರೆ.





