ಹೆಬ್ರಿಯ ಚಾಣಕ್ಯ ಸಂಸ್ಥೆ ರಾಜ್ಯಮಟ್ಟದ ಸಂಗೀತ ಸ್ಪರ್ಧೆ ವಾಯ್ಸ್ ಆಫ್ ಚಾಣಕ್ಯ-2025 ಸೀಸನ್ 8 ಗ್ರಾಮೀಣ ಪ್ರತಿಭೆಗಳ ಅನಾವರಣಕ್ಕೆ ವೇದಿಕೆ- ಶಾಂತರಾಮ ಸೂಡ

0

ಹೆಬ್ರಿಯ ಚಾಣಕ್ಯ ಸಂಸ್ಥೆ ರಾಜ್ಯಮಟ್ಟದ ಸಂಗೀತ ಸ್ಪರ್ಧೆ ವಾಯ್ಸ್ ಆಫ್ ಚಾಣಕ್ಯ-2025 ಸೀಸನ್ 8

ಗ್ರಾಮೀಣ ಪ್ರತಿಭೆಗಳ ಅನಾವರಣಕ್ಕೆ ವೇದಿಕೆ- ಶಾಂತರಾಮ ಸೂಡ

ಹೆಬ್ರಿ, ಡಿ. 8: ಯಾವುದೇ ಒಂದು ಪ್ರತಿಭೆ ಅನಾವರಣವಾಗಬೇಕಾದರೆ ಅದಕ್ಕೆ ಸೂಕ್ತ ವೇದಿಕೆ ಅಗತ್ಯ. ಈ ನಿಟ್ಟಿನಲ್ಲಿ ಕಳೆದ 8 ವರ್ಷಗಳಿಂದ ಹೆಬ್ರಿಯ ಚಾಣಕ್ಯ ಸಂಸ್ಥೆ ನಿರಂತರವಾಗಿ ಸಂಗೀತ ಸ್ಪರ್ಧೆಯನ್ನು ಆಯೋಜಿಸುವುದರ ಮೂಲಕ ಗ್ರಾಮೀಣ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುತ್ತಿರುವುದು ಶ್ಲಾಘನೀಯ ಎಂದು ಪೆರ್ಡೂರು ಬಂಟರ ಸಂಘ ಹಾಗೂ ಪೆರ್ಡೂರು ಬಂಟರ ಸೌಹಾರ್ದ ಸಹಕಾರಿ(ನಿ) ಇದರ ಅಧ್ಯಕ್ಷ ಕೆ. ಶಾಂತರಾಮ ಸೂಡ ಹೇಳಿದರು.

ಅವರು ಪೆರ್ಡೂರು ಅನಂತ ಸೌರಭ ಸಭಾಂಗಣದಲ್ಲಿ ಚಾಣಕ್ಯ ಮ್ಯೂಸಿಕ್ ಅಕಾಡೆಮಿ ಹೆಬ್ರಿ ಇವರ ನೇತೃತ್ವದಲ್ಲಿ ಕುಂಬಾರರ ಗುಡಿ ಕೈಗಾರಿಕಾ ಸಹಕಾರಿ ಸಂಘ ಪೆರ್ಡೂರು,ಉದಯಕೃಷ್ಣಯ್ಯ ಶೆಟ್ಟ ಚಾರಿಟೇಬಲ್ ಟ್ರಸ್ಟ್‌ ಇವರ ಸಹಯೋಗದೊಂದಿಗೆ ನಡೆದ ರಾಜ್ಯ ಮಟ್ಟದ ಟ್ರ್ಯಾಕ್ ಸಂಗೀತ ಸಮರದ ಸೆಮಿಫೈನಲ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕುಂಬಾರರ ಗುಡಿ ಕೈಗಾರಿಕಾ ಸಂಘ, ಪೆರ್ಡೂರು ಇದರ ಅಧ್ಯಕ್ಷ ಸಂತೋಷ ಕುಲಾಲ್ ಅಧ್ಯಕ್ಷತೆ ವಹಿಸಿ ಮಾತನಾಡಿ ಯಾವುದೇ ಒಂದು ಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದರೆ ತರಬೇತಿ ಮತ್ತು ನಿರಂತರ ಪ್ರಯತ್ನ ಅಗತ್ಯ. ಎಲ್ಲಾ ಕಲಾ ಪ್ರಕಾರಗಳನ್ನು ಒಂದೇ ಸೂರಿ ನಡಿ ಕಲಿಸುವ ಚಾಣಕ್ಯ ಸಂಸ್ಥೆಯಲ್ಲಿ ತಮ್ಮ ಮಕ್ಕಳನ್ನು ಸೇರಿಸುವ ಮೂಲಕ ಅವರ ಪ್ರತಿಭೆಗಳಿಗೆ ಅವಕಾಶ ಕಲ್ಪಿಸಿ ಎಂದರು.

ಎಸ್.ಕೆ. ಗೋಲ್ಡಸ್ಮಿತ್ ಇಂಡಸ್ಟ್ರೀಯಲ್ ಕೋ- ಅಪರೇಟಿವ್ ಸೊಸೈಟಿ ಲಿ., ಮಂಗಳೂರು ಇದರ ಅಧ್ಯಕ್ಷ ಉಪೇಂದ್ರ ಆಚಾರ್ಯ ಪೆರ್ಡೂರು ಮಾತನಾಡಿ ಉದಯಕುಮಾರ್ ಶೆಟ್ಟಿ ಅವರು ಕೇವಲ ಪತ್ರಕರ್ತರಾಗಿರದೆ ಸಮಾಜಮುಖಿ ಚಿಂತನೆ ಜೊತೆ ಇಂತಹ ಹಲವಾರು ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವುದರ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ ಎಂದರು.

ಸಮಾರಂಭದಲ್ಲಿ ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪ್ರಮೋದ್ ರೈ ಪಳಜೆ,ಉದ್ಯಮಿ ಸತೀಶ್ ಶೆಟ್ಟಿ ಕುತ್ಯಾರುಬೀಡು, ಅನಂತಪದ್ಮನಾಭ ದೇವಳದ ಸ್ವಾಗತ ಸಮಿತಿಯ ಅಧ್ಯಕ್ಷ ಸಂದೀಪ್ ಶೆಟ್ಟಿ,ಚಾಣಕ್ಯ ಸಂಸ್ಥೆಯ ಪ್ರಾಂಶುಪಾಲೆ ವೀಣಾ ಯು.ಶೆಟ್ಟಿ, ಪ್ರವೀಣ್ ಪಟೇಲ್, ಪ್ರಸನ್ನ ಮುನಿಯಾಲು, ವನಿತಾ, ಅಮೃತ ಸುಕೇಶ್ ಕುಲಾಲ್, ನಿತ್ಯಾನಂದ ಭಟ್ ಮೊದಲಾದವರು ಉಪಸ್ಥಿತರಿದ್ದರು.

ಚಾಣಕ್ಯ ಸಂಗೀತ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಪ್ರಾರ್ಥಿಸಿದರು ಸಂಗೀತ ನಿರ್ದೇಶಕ ರಮೇಶ್ ಡಿ. ಸಂಗೀತ ಗುರುಗಳಾದ ಸ್ಮಿತಾ ಭಟ್, ಶ್ರುತಿ ಭಟ್ ತೀರ್ಪುಗಾರರಾಗಿ ಭಾಗವಹಿಸಿದ್ದರು. ಚಾಣಕ್ಯ ಸಂಸ್ಥೆಯ ಅಧ್ಯಕ್ಷ
ಉದಯ್ ಕುಮಾರ್ ಶೆಟ್ಟಿ ಸ್ವಾಗತಿಸಿ,ಮುದ್ರಾಡಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಚಂದ್ರಶೇಖರ್ ಭಟ್ ಬಲ್ಲಾಡಿ ಕಾರ್ಯಕ್ರಮ ನಿರೂಪಿಸಿ, ರಚಿತಾ ಕಬ್ಬಿನಾಲೆ ವಂದಿಸಿದರು. ಚಾಣಕ್ಯ ಡ್ಯಾನ್ಸ ಅಕಾಡೆಮಿ ಪೆರ್ಡೂರು ತಂಡದ ವಿದ್ಯಾರ್ಥಿಗಳಿಂದ ಆಕರ್ಷಕ ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here