ಕುಂದಾಪುರದ ಕೋಟೇಶ್ವರದಲ್ಲಿ ಡಿ. 28 ರಂದು ಶ್ರೀಮತಿ ಸಹನಾ ಶೆಟ್ಟಿ, ಸುರೇಂದ್ರ ಶೆಟ್ಟಿ ಹಾಗೂ ಮಕ್ಕಳ ಇವರ ಸಂಕಲ್ಪದಲ್ಲಿ ತಿರುಮಲ ತಿರುಪತಿ ದೇವಸ್ಥಾನದ ವತಿಯಿಂದ ಲೋಕ ಕಲ್ಯಾಣಾರ್ಥವಾಗಿ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಲಿದೆ.
ಗೊದೋಲಿ ಮುಹೂರ್ತದಲ್ಲಿ, ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಅವರ ಆಶೀರ್ವಾದದಲ್ಲಿ ನಡೆಯುವ ಈ ಕಾರ್ಯಕ್ರಮವು ಕೋಟೇಶ್ವರದ ಸಹನಾ ಕನ್ವೆನ್ಷನ್ ಹಾಲ್ ನಲ್ಲಿ ನಡೆಯಲಿದೆ.
ಕಾರ್ಯಕ್ರಮದ ಪ್ರಯುಕ್ತ ಡಿ. 27 ರಂದು ಮಧ್ಯಾಹ್ನದಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಮನೋರಂಜನೆಯಾಗಿ ಸಂಜೆ 6.30 ರ ನಂತರ ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 400 ವಿದ್ಯಾರ್ಥಿ ಕಲಾವಿದರಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ನಡೆಯಲಿದೆ.
ಡಿ. 28 ರಂದು ಬೆಳಗ್ಗಿನಿಂದ ಹಲವು ಧಾರ್ಮಿಕ ಕಾರ್ಯಕ್ರಮ ನಡೆಯಲಿದ್ದು, ಸಂಜೆ ಬಳಿಕ ಗೋಧೋಳಿ ಮುಹೂರ್ತದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಲಿದೆ.
ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಬೇಕಾಗಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಮೊಕೇಸ್ತರ ಹಾಗೂ ಸಹನಾ ಸಮೂಹ ಸಂಸ್ಥೆ, ಕೋಟೇಶ್ವರ ಇದರ ಆಡಳಿತ ನಿರ್ದೇಶಕರಾದ ಸುರೇಂದ್ರ ಶೆಟ್ಟಿ ಎಳತ್ತೂರು ಅವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















