Friday, January 16, 2026
Google search engine
Homeರಾಜ್ಯಖ್ಯಾತ ಕಿರುತೆರೆ ನಟಿ ಆತ್ಮಹತ್ಯೆ

ಖ್ಯಾತ ಕಿರುತೆರೆ ನಟಿ ಆತ್ಮಹತ್ಯೆ

ಖ್ಯಾತ ಕಿರುತೆರೆ ನಟಿ ಆತ್ಮಹತ್ಯೆ

ಕನ್ನಡ ಮತ್ತು ತಮಿಳಿನ ಹಲವು ಧಾರಾವಾಹಿಗಳಲ್ಲಿ ನಟಿಸಿ ಸೈನಿಸಿಕೊಂಡಿದ್ದ ಕಿರುತೆರೆ ನಟಿ ನಂದಿನಿ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಮೈಲಸಂದ್ರದಲ್ಲಿ ನಡೆದಿದೆ.

ಮೂಲತಃ ಕೊಟ್ಟೂರಿನವರಾದ ನಂದಿನಿ ಸಿ.ಎಂ ಅವರು ಬೆಂಗಳೂರಿನಲ್ಲಿ ವಾಸವಿದ್ದರು. ಕನ್ನಡದ ʻಜೀವ ಹೂವಾಗಿದೆʼ, ʻಸಂಘರ್ಷʼ, ʻಮಧುಮಗಳುʼ, ʻನೀನಾದೆ ನಾʼ ಧಾರಾವಾಹಿಗಳಲ್ಲಿ ಅವರು ಪೋಷಕ ಪಾತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು.

ಅಷ್ಟೇ ಅಲ್ಲ ತಮಿಳು ಧಾರಾವಾಹಿಯಲ್ಲೂ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದರು. ತಮಿಳಿನ ʻಗೌರಿʼ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಈ ಧಾರಾವಾಹಿಯಲ್ಲಿ ʻಕನಕʼ ಹಾಗೂ ʻದುರ್ಗಾʼ ಎನ್ನುವ ದ್ವಿಪಾತ್ರದಲ್ಲಿ ಅವರು ನಟಿಸುತ್ತಿದ್ದರು.

ನಂದಿನಿ ಅವರ ಆತ್ಮಹತ್ಯೆಗೆ ಇನ್ನೂ ಕಾರಣ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರಿಸಲಾಗಿದೆ.

ನಂದಿನಿ ಮೂಲತಃ ಬಳ್ಳಾರಿ ಜಿಲ್ಲೆಯ ಕೊಟ್ಟೂರಿನವರು. ಸರ್ಕಾರಿ ಶಾಲಾ ಶಿಕ್ಷಕರಾಗಿದ್ದ ನಂದಿನಿ ತಂದೆ ಮೂರು ವರ್ಷಗಳ ಹಿಂದೆ ನಿಧನರಾಗಿದ್ದರು. ತಂದೆ ನಿಧನ ಬಳಿಕ ಆ ಕೆಲಸ ತಾನು ಮಾಡುವಂತೆ ಮನೆಯವರು ಒತ್ತಾಯಿಸಿದ್ದರು. ಆದ್ರೆ ಟೀಚರ್ ಕೆಲಸ ನಂದಿನಿಗೆ ಇಷ್ಟವಿರಲಿಲ್ಲವಂತೆ.

ಅಲ್ಲದೇ ಅನಾರೋಗ್ಯ ಸಮಸ್ಯೆಯಿಂದ ನೊಂದಿದ್ದ ನಂದಿನಿ, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments