ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ಉಪನಿರ್ದೇಶಕರ ಕಛೇರಿ ಉಡುಪಿ ಇವರ ಜಂಟಿ ಸಹಯೋಗದಲ್ಲಿ ಸರಕಾರಿ ಪದವಿಪೂರ್ವ ಕಾಲೇಜು, ಹೆಬ್ರಿ ಇಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಭಾವಗೀತೆ ಗಾಯನ ಸ್ಪರ್ಧೆಯಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಅಕ್ಷರ್ ಕುಮಾರ್ ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.












