ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಭಜನಾ ಮಂಡಳಿಯ ಸದಸ್ಯರಿಗೆ ಸಮವಸ್ತ್ರ ವಿತರಣೆ
ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಹಾಗೂ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ನೇತೃತ್ವದಲ್ಲಿ ಅಬ್ಬನಡ್ಕ ಭಜನಾ ಮಂಡಳಿಯ ಸದಸ್ಯರಿಗೆ ಸಮವಸ್ತ್ರ ವಿತರಣೆ ಮಾಡಲಾಯಿತು.
ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ಉಪಾಧ್ಯಕ್ಷರಾದ ಬೋಳ ರಘುವೀರ್ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಕರಾವಳಿ ಭಜನಾ ಸಂಸ್ಕಾರ ವೇದಿಕೆಯ ಕೇಂದ್ರ ಸಮಿತಿಯ ಉಪಾಧ್ಯಕ್ಷರು, ಕಾರ್ಕಳ ಭಜನಾ ಒಕ್ಕೂಟದ ಸ್ಥಾಪಕಾಧ್ಯಕ್ಷರಾದ ಶ್ರೀಕಾಂತ್ ಪ್ರಭು ಪಳ್ಳಿ, ಕಾರ್ಕಳ ಭಜನಾ ಪರಿಷತ್ತಿನ ಉಪಾಧ್ಯಕ್ಷರು ಹಾಗೂ ಬೆಳ್ಮಣ್ಣು ವಲಯದ ಭಜನಾ ಪರಿಷತ್ತಿನ ವಲಯಾಧ್ಯಕ್ಷರಾದ ಸಚಿತ್ ಪೂಜಾರಿ ನಂದಳಿಕೆ, ಕಾರ್ಕಳ ಭಜನಾ ಒಕ್ಕೂಟ ಬೆಳ್ಮಣ್ಣು ವಲಯದ ವಲಯಾಧ್ಯಕ್ಷರಾದ ರಾಜೇಂದ್ರ ಶೆಟ್ಟಿಗಾರ್. ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ. ಮಹಿಳಾ ಸಂಘಟನಾ ಕಾರ್ಯದರ್ಶಿ ಸುಲೋಚನಾ ರಾಜೇಶ್ ಕೋಟ್ಯಾನ್, ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿಯ ಗೌರವಾಧ್ಯಕ್ಷರಾದ ರಾಜೇಶ್ ಕೋಟ್ಯಾನ್, ಅಧ್ಯಕ್ಷರಾದ ಕೀರ್ತನ್ ಪೂಜಾರಿ ಬೋಳ, ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಸದಸ್ಯರಾದ ಪದ್ಮಶ್ರೀ ಪೂಜಾರಿ, ವೀಣಾ ಪೂಜಾರಿ, ಲಲಿತಾ ಆಚಾರ್ಯ, ಲೀಲಾ ಪೂಜಾರಿ ಮೊದಲಾದವರಿದ್ದರು.















