ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಪಾಲ್ದಾಕ್ಯಾರು ಕೆರ್ವಾಶೆ ಇದರ 24ನೇ ವರ್ಷದ ಮೊಸರು ಕುಡಿಕೆ ಮತ್ತು ಭಜನಾ ಕಾರ್ಯಕ್ರಮವು ನಡೆಯಿತು.ಬೆಳಿಗ್ಗೆಯಿಂದ ಸಂಜೆಯವರೆಗೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.ಧ.ಗ್ರಾ.ಯೋ.(ರಿ.) ಮಿಯ್ಯಾರು ಇದರ ವಲಯಾಧ್ಯಕ್ಷರಾದ ಅಶ್ವಥ್ ನಾರಾಯಣ್ ನಾಯ್ಕ್ ರವರು ಉದ್ಘಾಟಿಸಿ ಉಗ್ಗಪ್ಪ ಪರವರವರು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ಸಂಜೆ ಧಾರ್ಮಿಕ ಸಭೆ,ಬಹುಮಾನ ವಿತರಣೆ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಭಜನಾ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ ಪೂಜಾರಿಯವರು ಮುಂದಿನ ವರ್ಷಕ್ಕೆ ಭಜನಾ ಮಂಡಳಿಯ ಜೀರ್ಣೋದ್ದಾರದ ಕೆಲಸ ಕಾರ್ಯಗಳು ಅಗಲಿದ್ದು ತಮ್ಮೆಲ್ಲರ ಸಹಕಾರ ಕೋರಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಭಜನಾ ಮಂಡಳಿಯ ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ್ ಪ್ರಭುರವರು ಮಾಹಿತಿ ಮಾರ್ಗದರ್ಶನ ನೀಡಿ ಶುಭ ಹಾರೈಸಿದರು.ಸಮಾರಂಭದ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.ವೇದಿಕೆಯಲ್ಲಿ ಭಜನಾ ಮಂಡಳಿಯ ಗೌರವಾಧ್ಯಕ್ಷ ಜಯರಾಮ್ ಬಂಗೇರ,ಗ್ರಾಮಪಂಚಾಯತ್ ಅಧ್ಯಕ್ಷೆ ಸುನೀತಾ,ಗ್ರಾಮಪಂಚಾಯತ್ ಉಪಾಧ್ಯಕ್ಷ ಸುನೀಲ್ ಶೆಟ್ಟಿ,ಗ್ರಾಮ ಪಂಚಾಯತ್ ಸದಸ್ಯರಾದ ಸುಚೇತಾ,ಭಜನಾ ತರಭೇತುದಾರರಾದ ನಿತಿನ್ ಪೂಜಾರಿ ಮಾಳ,ಶ್ರೀಕಾಂತ್ ಕುಮಾರ್,ಹಿರಿಯ ಕೃಷಿಕರಾದ ನೇಮಿರಾಜ್ ಜೈನ ಉಪಸ್ಥಿತರಿದ್ದರು.
ಕ್ರೀಡಾಕೂಟದ ಬಹುಮಾನದ ಪ್ರಾಯೋಜಕತ್ವವನ್ನು ವಹಿಸಿದ್ದ ಪ್ರಶಾಂತ್ ಶೆಣೈ ಬಾಲಾಜಿ ಮೊಬೈಲ್ಸ್ ಕಾರ್ಕಳ ಇವರನ್ನು ಅಭಿನಂದಿಸಲಾಯಿತು.ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪಾಲ್ದಾಕ್ಯಾರು ಇಲ್ಲಿ 8 ವರ್ಷಗಳ ಕಾಲ ಸೇವೆ ಸಲ್ಲಿಸಿದ ಶಿಕ್ಷಕಿ ಶ್ರೀಲತಾರವರಿಗೆ ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಉಪಸ್ಥಿತರಿದ್ದ ಎಲ್ಲ ಅತಿಥಿಗಳಿಗೆ ಗಿಡಗಳನ್ನು ಸ್ಮರಣಿಕೆಯಾಗಿ ನೀಡಲಾಯಿತು.ಶಶಿಧರ್ ಕುಲಾಲ್ ಸ್ವಾಗತಿಸಿ ಕೌಸಲ್ಯರವರು ಧನ್ಯವಾದಗೈದರು.