Saturday, July 27, 2024

ಕ್ರೈಸ್ಟ್ ಕಿಂಗ್:ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Homeಕಾರ್ಕಳಕ್ರೈಸ್ಟ್ ಕಿಂಗ್:ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಕಾರ್ಕಳ:ಇಲ್ಲಿನ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಸಂಸ್ಥೆಯ ಫಾ.ಎಫ್.ಪಿ.ಎಸ್ ಮೋನಿಸ್ ಸಭಾಂಗಣದಲ್ಲಿ ಆಚರಿಸಲಾಯಿತು. ನಿಟ್ಟೆ ಡಾ.ಎನ್.ಎಂ.ಎ.ಎ ಇಂಜಿನಿಯರಿ೦ಗ್ ಕಾಲೇಜಿನ ಪ್ರಾಧ್ಯಾಪಕರಾದ ಶಶಿಕಾಂತ್ ಕರಿಂಕ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು “ಪರಿಸರವೇ ದೇವರು, ದೇವರೇ ಪರಿಸರ ವಿಜ್ಞಾನ ಪರಿಸರಕ್ಕೆ ಪೂರಕವಾಗಿ ಬಳಸಬೇಕು. ವಿದ್ಯಾರ್ಥಿಗಳು ಅಂತರ್ಜಾಲದಲ್ಲಿ ಸಿಗುವ ಮಾಹಿತಿಗಳನ್ನು ಸುಲಭವಾಗಿ ನಂಬದೆ ಸತ್ಯಾಸತ್ಯತೆಗಳನ್ನು ಪರಿಶೀಲಿಸಬೇಕು” ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕ್ರೈಸ್ಟ್ ಕಿಂಗ್ ಎಜುಕೇಷನ್ ಟ್ರಸ್ಟ್ನ ಸದಸ್ಯ ಡಾ|ಪೀಟರ್ ಫೆರ್ನಾಂಡಿಸ್ ಮಾತನಾಡಿ “ಸರ್.ಸಿ.ವಿ ರಾಮನ್ ಅವರ ಮಾತಿನಂತೆ ವಿದ್ಯಾರ್ಥಿಗಳು ಪರಿಸರವನ್ನು, ವಸ್ತುಗಳನ್ನು ಕೇವಲ ನೋಡಬಾರದು ಬದಲಾಗಿ ಅವಲೋಕಿಸಬೇಕು” ಎಂದು ಹೇಳಿದರು.

ಇನ್ನೋರ್ವ ಅತಿಥಿ ಕಾರ್ಕಳದ ಸಿವಿಲ್ ಇಂಜಿನಿಯರ್ ನಾಸಿರ್ ಶೇಖ್ ಮಾತನಾಡಿ “ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡಾಗ ವಿದ್ಯಾರ್ಥಿಗಳ ಭವಿಷ್ಯ ಉತ್ತಮವಾಗಿ ಮೂಡಿಬರುತ್ತದೆ” ಎಂದು ಹೇಳಿದರು.

ಸಂಸ್ಥೆಯ ಪ್ರೌಢಶಾಲಾ ವಿಭಾಗದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಹೇಮಲತ ಅವರು ಮಾತನಾಡಿ “ವಿದ್ಯಾರ್ಥಿಗಳು ಸಮಯದ ಪಾಲನೆಗೆ ಮಹತ್ವ ನೀಡಬೇಕು. ಸಮಯವನ್ನು ಸದ್ವಿನಿಯೋಗ ಮಾಡಿಕೊಂಡಾಗ ಮಾತ್ರ ಅಂದುಕೊಂಡದ್ದನ್ನು ಸಾಧಿಸಲು ಸಾಧ್ಯ” ಎಂದು ಹೇಳಿದರು.

ಶಿಕ್ಷಕಿ ಶ್ರೀಮತಿ ವಿಜೇತಾ ಹಾಗೂ ವಿದ್ಯಾರ್ಥಿ ಮೊಹಮ್ಮದ್ ರಫಾನ್ ವಿಜ್ಞಾನ ದಿನದ ಕುರಿತು ಮಾತನಾಡಿದರು. ಸಂಸ್ಥೆಯ ಪ್ರೌಢಶಾಲಾ ಮುಖ್ಯ ಶಿಕ್ಷಕ ಡೊಮಿನಿಕ್ ಅಂದ್ರಾದೆ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಮೇರಿಯನ್ ಡಿ’ಸೋಜ, ಸಂಸ್ಥೆಯ ಆಪ್ತಸಮಾಲೋಚಕಿ ಸಿಸ್ಟರ್ ಶಾಲೆಟ್ ಸಿಕ್ವೇರಾ, ಪ್ರಾಥಮಿಕ ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಮಾದರಿಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳಾದ ಫಿಯೋನಾ ರಿಯಾ ಪಿಂಟೋ ಸ್ವಾಗತಿಸಿ ಯಶಸ್ ವಂದಿಸಿದರು. ಶೆರಿನಾ ಲೋಬೋ ಕಾರ್ಯಕ್ರಮ ನಿರೂಪಿಸಿದರು.

ಇನ್ನು ಹೆಚ್ಚಿನ ಸುದ್ದಿಗಳು.

LEAVE A REPLY

Please enter your comment!
Please enter your name here

RELATED ARTICLES

Most Popular

Recent Comments

Times of karkala Add