ಮುಡಾರು:ಮನೆಯಲ್ಲಿದ್ದ ಚಿನ್ನಾಭರಣ ಕಳವು
ಮನೆಗೆ ನುಗ್ಗಿ ಚಿನ್ನಾಭರಣ ಕಳವುಗೈದ ಘಟನೆ ಕಾರ್ಕಳ ತಾಲೂಕು ಮುಡಾರು ಗ್ರಾಮದ ಗುರ್ಗಾಲ್ ಗುಡ್ಡೆಯಲ್ಲಿ ನಡೆದಿದೆ.ಪ್ರಭಾ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ.
ಪ್ರಭಾರವರು ಮನೆಯ ಬೀಗದ ಕೀಯನ್ನು ಯಾವಾಗಲೂ ತಮ್ಮ ಮನೆಗೆ ಬೀಗ ಹಾಕಿ, ಕೀಯನ್ನು ಹೊರಗೆ ಡಬ್ಬಿಯಲ್ಲಿ ಇರಿಸುತ್ತಿದ್ದುಆ.30ರಂದು ಮಧ್ಯಾಹ್ನ 3:30 ಗಂಟೆಯಿಂದ ಸಾಯಂಕಾಲ 5:00 ಗಂಟೆಯ ಮಧ್ಯೆ ಅವಧಿಯಲ್ಲಿ ಕಳ್ಳತನ ನಡೆದಿದ್ದು ಕಳ್ಳರು ಕೀ ಸಹಾಯದಿಂದ ಮನೆಯ ಬಾಗಿಲನ್ನು ತೆಗೆದು ಮನೆಯೊಳಗೆ ಪ್ರವೇಶಿಸಿ ಮನೆಯ ಬೆಡ್ ರೂಮ್‌ನ ಗೋದ್ರೇಜ್ ಲಾಕರನ್ನು ತೆರೆದು ಲಾಕರನಲ್ಲಿರಿಸಿದ್ದ ಚಿನ್ನಾಭರಣಗಳ ಪೈಕಿ ಸುಮಾರು 33 ಪವನ್ ತೂಕದ 10,05,000/- ಅಂದಾಜು ಮೌಲ್ಯದ ವಿವಿಧ ರೀತಿಯ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ.ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.