Wednesday, September 18, 2024
Google search engine
Homeಕಾರ್ಕಳಲೈಂಗಿಕ ದೌರ್ಜನ್ಯ ಆರೋಪ:ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮೇಲೆ ಎಫ್ಐಆರ್

ಲೈಂಗಿಕ ದೌರ್ಜನ್ಯ ಆರೋಪ:ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮೇಲೆ ಎಫ್ಐಆರ್

ಲೈಂಗಿಕ ದೌರ್ಜನ್ಯ ಆರೋಪ:ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮೇಲೆ ಎಫ್ಐಆರ್

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದಾಗಿ ದೂರು

ಲೈಂಗಿಕ ದೌರ್ಜನ್ಯ ಆರೋಪ ಮೇಲೆ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮೇಲೆ ಎಫ್ಐಆರ್ ದಾಖಲಾಗಿದೆ.

47 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ದಕ್ಷಿಣ ಕನ್ನಡ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

47 ವರ್ಷದ ಮಹಿಳೆಯೊಬ್ಬರು‌ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದಾಗಿ ದೂರು ದಾಖಲಿಸಿದ್ದಾರೆ. 2023ರ ಜೂನ್ ನಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ. ದೌರ್ಜನ್ಯದ ಫೋಟೋ, ಸೆಲ್ಫಿ ವೀಡಿಯೋ ಮಾಡಿ ಬ್ಲಾಕ್‌ಮೇಲ್‌ ಮಾಡಿದ್ದಾರೆಂದು ಸಹ ಆರೋಪಿಸಿದ್ದಾರೆ. ಮಹಿಳೆ ನೀಡಿದ ದೂರಿನ ಮೇರೆಗೆ ಐಪಿಸಿ ಸೆಕ್ಷನ್‌ 417, 354ಎ, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

 

ಅರುಣ್‌ ಪುತ್ತಿಲ ಅವರು, 2023ರಲ್ಲಿ ಪುತ್ತೂರು ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಬಿಜೆಪಿಗೆ ಠಕ್ಕರ್‌ ಕೊಟ್ಟು ಹಿಂದುತ್ವದ ಹೆಸರಿನಲ್ಲಿ ಸ್ಪರ್ಧೆ ಮಾಡಿ ಪ್ರಖ್ಯಾತಿ ಪಡೆದಿದ್ದರು. ಪುತ್ತಿಲ ಅವರ ಪ್ರಖ್ಯಾತಿ ಮತ್ತು ಹಿಂದುತ್ವದ ಪ್ರತಿಪಾದನೆಯಿಂದ ಮಹಿಳೆ ಅಭಿಮಾನಿಯಾಗಿದ್ದರು. ಪುತ್ತಿಲಗೆ ಅಭಿಮಾನಿ ಆಗಿ ಸಾಮಾಜಿಕ ಜಾಲತಾಣದಲ್ಲಿ ಫಾಲೋ ಮಾಡುತ್ತಿದ್ದರು. ಜೊತೆಗೆ ಪುತ್ತಿಲಗೆ ನೈತಿಕ ಬೆಂಬಲವನ್ನೂ ನೀಡುತ್ತಿದ್ದರು. ಬಳಿಕ ಪರಿಚಯವಾದ ಮೇಲೆ ಪುತ್ತಿಲ ಅವರು 2023ರ ಜೂನ್‌ನಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್‌ಗೆ ಕರೆಸಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಬೆದರಿಸಿದ್ದಾರೆ. ಬಳಿಕ ದೂರುದಾರರ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ದೂರಿನಲ್ಲಿ ಉಲ್ಲೇಖವಾಗಿದೆ.

2024ರ ಲೋಕಸಭಾ ಚುನಾವಣೆಯ ಬಳಿಕ ನನ್ನೊಂದಿಗೆ ಮಾತುಕತೆ ಕಡಿಮೆಗೊಳಿಸಿದ್ದರು. ನನ್ನನ್ನು ಸಂಪೂರ್ಣವಾಗಿ ಶೋಷಣೆಗೆ ಒಳಪಡಿಸಿ ಅವರ ಆಸೆ ತೀರಿಸಿಕೊಂಡು ನನ್ನನ್ನು ದೂರ ಮಾಡಿದರು. ಆ ಭಯದಿಂದ ನನ್ನ ನಿವಾಸವನ್ನು ಪುತ್ತೂರಿಗೆ ಸ್ಥಳಾಂತರಿಸಿ ಬಾಡಿಗೆ ಮನೆಯಲ್ಲಿ ನನ್ನ ಮಗಳೊಂದಿಗೆ ಉದ್ಯೋಗ ಹಾಗೂ ವರಮಾನವಿಲ್ಲದೇ ಕಷ್ಟಪಡುತ್ತಿದ್ದೇನೆ. ನನಗೆ ಮತ್ತು ನನ್ನ ಮಗಳಿಗೆ ಪುತ್ತಿಲರು ಮಾಡಿದ ದ್ರೋಹ, ಅನ್ಯಾಯ, ಅಕ್ರಮ ವಿಶ್ವಾಸ ದ್ರೋಹಕ್ಕೆ ಕಾನೂನು ಕ್ರಮ ಕೈಗೊಂಡು ನನಗೆ ಮತ್ತು ನನ್ನ ಮಗಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments