Tuesday, June 18, 2024

ವಿದ್ಯಾಮಾತಾ ಅಕಾಡೆಮಿಯ ಕಾರ್ಕಳ ಶಾಖೆ ಶುಭಾರಂಭ

Homeಕಾರ್ಕಳವಿದ್ಯಾಮಾತಾ ಅಕಾಡೆಮಿಯ ಕಾರ್ಕಳ ಶಾಖೆ ಶುಭಾರಂಭ

ವಿದ್ಯಾಮಾತಾ ಅಕಾಡೆಮಿಯ ಕಾರ್ಕಳ ಶಾಖೆ ಶುಭಾರಂಭ
ಶಾಖೆಯನ್ನು ಉದ್ಘಾಟಿಸಿದ ವಜ್ರದೇಹಿ ಶ್ರೀಗಳು

ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರನ್ನು ಸನ್ಮಾನಿಸಿ ಗೌರವಿಸಿದ ವಿದ್ಯಾಮಾತಾ ಅಕಾಡೆಮಿ

ಸ್ಪರ್ಧಾತ್ಮಕತೆಯ ಕುರಿತು ಚಿಕ್ಕಂದಿನಿಂದಲೇ ಅರಿವು ಮೂಡಿಸುವುದು ಇಂದಿನ ಅಗತ್ಯ: ಶ್ರೀ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿ

ಕರ್ನಾಟಕ ರಾಜ್ಯದ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಯ ಎರಡನೇ ಶಾಖೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ವಜ್ರದೇಹಿ ಮಠದ ಶ್ರೀ ಶ್ರೀ ಶ್ರೀ ರಾಜಶೇಖರನಂದ ಶ್ರೀಗಳು “ಈ ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧಾತ್ಮಕತೆಯ ಬಗ್ಗೆ ಯುವ ಜನತೆಯಲ್ಲಿ ಅರಿವನ್ನು ಮೂಡಿಸುವುದು ತೀರಾ ಅನಿವಾರ್ಯವಾಗಿದ್ದು ಈ ಅರಿವನ್ನು ಎಳೆಯ ವಯಸ್ಸಿನಲ್ಲಿಯೇ ಬೆಳೆಸಿಕೊಂಡರೆ ಪ್ರತೀ ಇಲಾಖೆಗಳಲ್ಲೂ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಗಳನ್ನು ಕಾಣಬಹುದು” ಎಂದು ಈ ನಿಟ್ಟಿನಲ್ಲಿ ಕಾರ್ಯಪ್ರವೃತವಾಗಿರುವ ವಿದ್ಯಾಮಾತಾ ಅಕಾಡೆಮಿ ಕಾರ್ಯವೈಖರಿಯ ಕುರಿತು ಮೆಚ್ಚುಗೆಯ ನುಡಿಯನ್ನಾಡಿ ಸಂಸ್ಥೆಗೆ ಶುಭಾಶೀರ್ವಾದ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅಮೃತ ಭಾರತಿ ಟ್ರಸ್ಟ್ ಇದರ ಕಾರ್ಯದರ್ಶಿಗಳಾದ ಗುರುದಾಸ್ ಶೆಣೈ ರವರು ಮಾತನಾಡಿ ಗ್ರಾಮೀಣ ಪ್ರದೇಶಗಳಿಂದ ಹಲವು ಅಧಿಕಾರಿಗಳನ್ನು ನೀಡಿದ ವಿದ್ಯಾಮಾತಾ ಅಕಾಡೆಮಿಯು ಉಡುಪಿ ಜಿಲ್ಲೆಗೂ ಕಾಲಿಟ್ಟದ್ದು ಸಂತಸದ ಸಂಗತಿ ಎಂದು ಹರ್ಷ ವ್ಯಕ್ತಪಡಿಸಿದರು.

ಮತ್ತೊರ್ವ ಅತಿಥಿಯಾದ ಉಜ್ವಲ್ ಗ್ರೂಪ್ ನ ವ್ಯವಸ್ಥಾಪಕ ನಿರ್ದೇಶಕರಾದ ಅಜಯ್ ಶೆಟ್ಟಿರವರು ಸ್ಪರ್ಧಾತ್ಮಕ ಯುಗದಲ್ಲಿ ಯುವ ಜನತೆಯ ಕೌಶಲ್ಯ ಸಾಮರ್ಥ್ಯವೂ ಕೂಡ ಬಹಳ ಮುಖ್ಯ ಎಂಬುದನ್ನು ಈ ಸಂಸ್ಥೆ ಈಗಾಗಲೇ ಸಾಬೀತು ಪಡಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಾಧಕರಿಗೆ ಸನ್ಮಾನ:
ಇದೇ ಸಂದರ್ಭದಲ್ಲಿ ಮಂಗಳೂರಿನ ಗೋಕರ್ಣನಾಥೇಶ್ವರ ಕಾಲೇಜ್ ಹಾಗೂ ಶ್ರೀ ವೆಂಕಟರಮಣ ಮಹಿಳಾ ಕಾಲೇಜ್ ನಲ್ಲಿ ಒಟ್ಟು 35 ವರ್ಷಗಳ ಕಾಲ ಪ್ರಾಂಶುಪಾಲರಾಗಿ ಶಿಕ್ಷಣ ಕ್ಷೇತ್ರದಲ್ಲಿ ಸೇವೆಸಲ್ಲಿಸಿದ ಪ್ರೊ.ಮಿತ್ರ ಪ್ರಭಾ ಹೆಗ್ಡೆ ಮತ್ತು ಶೈಕ್ಷಣಿಕ ಹಾಗೂ ಕನ್ನಡ ಸಾಹಿತ್ಯ ರಂಗದಲ್ಲಿ ಸೇವೆ ಸಲ್ಲಿಸಿದ ಜ್ಯೋತಿ ಗುರುಪ್ರಸಾದ್ ರವರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಾಸ್ತವಿಕ ನೆಲೆಯಲ್ಲಿ ಮಾತನಾಡಿ ಸ್ವಾಗತಿಸಿದ ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ಯವರು ಸಂಸ್ಥೆಯ ಏಳಿಗೆಯಲ್ಲಿ ಎಲ್ಲರ ಸಹಕಾರವನ್ನು ಕೋರಿದರು.ಹಾಗೂ ದಿನಾಂಕ 10.04.2024ರಿಂದ VAO ಮತ್ತು PDO ನೇಮಕಾತಿಯ ಆನ್ಲೈನ್ ತರಬೇತಿಯು ಪ್ರಾರಂಭವಾಗಲಿದೆ ಎಂದು ಘೋಷಿಸಿದರು.

ವಿದ್ಯಾಮಾತಾ ಅಕಾಡೆಮಿಯ ಕಾರ್ಕಳ ಶಾಖೆಯ ಸಂಚಾಲಕರಾದ ಶ್ರೀಮತಿ ರಮಿತ ಶೈಲೇಂದ್ರ ರಾವ್ ರವರು ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲಾ ಅತಿಥಿ ಅಭ್ಯಾಗತರನ್ನು ಅಭಿನಂದಿಸಿದರು, ನೂತನ ಶಾಖೆಯ ಶುಭಾರಂಭದ ಸುಸಂದರ್ಭದಲ್ಲಿ ಸಂಸ್ಥೆಯ ತರಬೇತುದಾರರು, ಸಿಬ್ಬಂದಿ ವರ್ಗ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇನ್ನು ಹೆಚ್ಚಿನ ಸುದ್ದಿಗಳು.

LEAVE A REPLY

Please enter your comment!
Please enter your name here

RELATED ARTICLES

Most Popular

Recent Comments

Times of karkala Add