ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಮುದ್ದಣ್ಣ ನಗರದ ವಾರಿಜ ಎಂಬವರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದೆ. ಸ್ಪೋಟದ ತೀವ್ರತೆಗೆ ಗೃಹಬಳಕೆಯ ವಸ್ತುಗಳು ಹಾನಿಗೊಳಗಾಗಿದ್ದು, ಅದೃಷ್ಟಾವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಮನೆಯ ಅಡುಗೆ ಕೋಣೆಯ ಹಿಂಭಾಗದ ಕೊಠಡಿಯಲ್ಲಿದ್ದ ಇರಿಸಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟವಾದ ಪರಿಣಾಮ ಮನೆಯಲ್ಲಿದ್ದವರಿಗೆ ಹಾನಿಗಳಾಗಿಲ್ಲ. ಕೊಠಡಿಯೊಳಗಿದ್ದ ಸಾಮಗ್ರಿಗಳೆಲ್ಲವೂ ಹಾನಿಗೊಳಗಾಗಿದ್ದು, ಸುಮಾರು 3 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ.
















