ಕಾಂಗ್ರೆಸ್ ಕ್ರೀಡೋತ್ಸವದ ಪೂರ್ವಭಾವಿ ಸಭೆ
ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಕಳ, ಹೆಬ್ರಿ ಹಾಗೂ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ನಡೆಯಲಿರುವ ಕಾಂಗ್ರೆಸ್ ಕ್ರೀಡೋತ್ಸವ ಹಾಗೂ ಕಿಸಾನ್ ಸಭಾ ಸಭಾಂಗಣದ ಲೋಕಾರ್ಪಣಾ ಕಾರ್ಯಕ್ರಮದ ತಯಾರಿಯ ಪೂರ್ವಭಾವಿ ಸಭೆಯು ಇಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ಕಾರ್ಕಳ ಕಾಂಗ್ರೆಸ್ ಮುಖಂಡರಾದ ಉದಯ ಶೆಟ್ಟಿ ಮುನಿಯಾಲು ಅವರು ಮಾತನಾಡಿ ಮಾಜಿ ಮುಖ್ಯಮಂತ್ರಿ ಡಾ.ಎಂ. ವೀರಪ್ಪ ಮೊಯ್ಲಿಯವರ ನಿರ್ದೇಶನದಲ್ಲಿ ಕಿಸಾನ್ ಸಭಾದ ಸಭಾಂಗಣದ ಲೋಕಾರ್ಪಣ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮಿಸಲಿದ್ದು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲರೂ ಶಕ್ತಿಮೀರಿ ಶ್ರಮಿಸಬೇಕು, ಮತ್ತು ಕಾರ್ಕಳದ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ನಡೆಯಲಿರುವ ಹೊನಲು ಬೆಳಕಿನ ಅಥ್ಲೆಟಿಕ್ ಕ್ರೀಡಾಕೂಟವನ್ನು ಯಶಸ್ವಿಗೊಳಿಸಲು ಪ್ರತಿಯೊಬ್ಬರು ಶ್ರಮಿಸಬೇಕೆಂದು ಕರೆ ನೀಡಿದರು.
ರಾಜ್ಯ ನಾರಾಯಣಗುರು ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಮುದ್ರಾಡಿ ಮಾತನಾಡಿ ಕ್ರೀಡೋತ್ಸವದ ಯಶಸ್ಸು ನಮ್ಮೆಲ್ಲರ ಜವಾಬ್ದಾರಿ, ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರು ನಮ್ಮ ಜವಾಬ್ದಾರಿ ಅರಿತು ಕೆಲಸವನ್ನು ಮಾಡಿದಾಗ ಕಾರ್ಯಕ್ರಮ ಯಶಸ್ವಿಯಾಗಲು ಸಾಧ್ಯ ಎಂದರು.
ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ್ ರಾವ್ ಅವರು ಮಾತನಾಡಿ ಕಾರ್ಕಳದಲ್ಲಿರುವ ಕ್ರೀಡಾಪ್ರತಿಭೆಗಳನ್ನು ಪ್ರೋತ್ಸಾಹಿಸುವ ಮತ್ತು ಬೆಳೆಸುವ ನಿಟ್ಟಿನಲ್ಲಿ ಕಾಂಗ್ರೆಸ್ ಕ್ರೀಡೋತ್ಸವವನ್ನು ಆಯೋಜಿಸಲಾಗಿದೆ. ಕಾರ್ಕಳದ ಇತಿಹಾಸದಲ್ಲಿ ಪ್ರಥಮ ಬಾರಿಗೆ ಹೊನಲು ಬೆಳಕಿನ ಅಥ್ಲೆಟಿಕ್ ಕ್ರೀಡಾಕೂಟ ಆಯೋಜಿಸಿದ ಕೀರ್ತಿಗೆ ಕಾರ್ಕಳ ಕಾಂಗ್ರೆಸ್ ಭಾಜನರಾಗಲಿದೆ, ಇದರ ಯಶಸ್ವಿಗೆ ಪ್ರತಿಯೊಬ್ಬರೂ ಸಹಕಾರವನ್ನು ನೀಡಬೇಕು ಎಂದರು. ಬ್ಲಾಕ್ ಉಪಾದ್ಯಕ್ಷರಾದ ಜಾರ್ಜ್ ಕ್ಯಾಸ್ತಲಿನೊ ಮತಪಟ್ಟಿ ಪರಿಷ್ಕರಣೆಯ ಬಗ್ಗೆ ಮಾಹಿತಿಯನ್ನು ನೀಡಿದರು. ಜಿಲ್ಲಾ ಕಾಂಗ್ರೆಸ್ ಸಮಿತಿಯ ಸುಧಾಕರ ಕೋಟ್ಯಾನ್, ಮಹಿಳಾ ಅಧ್ಯಕ್ಷೆ ಶ್ರೀಮತಿ ಭಾನು ಬಾಸ್ಕರ ಪೂಜಾರಿ, ಯುವ ಕಾಂಗ್ರೆಸ್ ಅಧ್ಯಕ್ಷ ಸೂರಜ್ ಶೆಟ್ಟಿ ನಕ್ರೆ ಸಂದರ್ಭೋಚಿತವಾಗಿ ಮಾತನಾಡಿದರು.
ಸಭೆಯಲ್ಲಿ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಿನಾಥ್ ಭಟ್, ಕಾರ್ಕಳ ಮತ್ತು ಹೆಬ್ರಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಅಜಿತ್ ಹೆಗ್ಡೆ ಮಾಳ, ಶಂಕರ ಶೇರಿಗಾರ್, ಸದಾಶಿವ ದೇವಾಡಿಗ, ಪ್ರಭಾಕರ ಬಂಗೇರ, ರವಿಶಂಕರ್ ಶೇರಿಗಾರ, ಉಮೇಶ್ ರಾವ್ ಬಜಗೋಳಿ, ಚಂದ್ರಶೇಖರ ಬಾಯಾರಿ, ಗ್ರಾಮೀಣ ಸಮಿತಿಯ ಅಧ್ಯಕ್ಷರು, ವಿವಿಧ ಘಟಕಗಳ ಅಧ್ಯಕ್ಷರುಗಳು, ರಾಜ್ಯ ಮತ್ತು ಜಿಲ್ಲಾ ಘಟಕದ ಪದಾಧಿಕಾರಿಗಳು, ಚುನಾಯಿತ ಜನಪ್ರತಿನಿದಿಗಳು, ನಾಮನಿರ್ದೇಶಿತ ಸದಸ್ಯರುಗಳು, ಸೊಸೈಟಿ ಅಧ್ಯಕ್ಷರು ಮೊದಲಾದವರು ಉಪಸ್ಥಿತರಿದ್ದರು.
ಪ್ರಸನ್ನ ಶೆಟ್ಟಿಗಾರ್ ಸ್ವಾಗತಿಸಿದರು, ಬ್ಲಾಕ್ ಕಾಂಗ್ರೆಸ್ ವಕ್ತಾರ ಪ್ರದೀಪ್ ಬೇಲಾಡಿ ಕಾರ್ಯಕ್ರಮ ನಿರೂಪಿಸಿ, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಆಚಾರ್ಯ ಇನ್ನಾ ಧನ್ಯವಾದವಿತ್ತರು.















