Thursday, January 22, 2026
Google search engine
Homeಕಾರ್ಕಳಕ್ರೈಸ್ಟ್ ಕಿಂಗ್ : ಭಾರತೀಯ ಕಂಪೆನಿ ಸೆಕ್ರೆಟರಿ(ಸಿಎಸ್-ಇಇಟಿ) ಪರೀಕ್ಷೆಯಲ್ಲಿ ಅಭೂತಪೂರ್ವ ಸಾಧನೆ

ಕ್ರೈಸ್ಟ್ ಕಿಂಗ್ : ಭಾರತೀಯ ಕಂಪೆನಿ ಸೆಕ್ರೆಟರಿ(ಸಿಎಸ್-ಇಇಟಿ) ಪರೀಕ್ಷೆಯಲ್ಲಿ ಅಭೂತಪೂರ್ವ ಸಾಧನೆ

ಪರೀಕ್ಷೆ ಬರೆದ ಹದಿನೈದು ವಿದ್ಯಾರ್ಥಿಗಳಲ್ಲಿ ಹನ್ನೊಂದು ವಿದ್ಯಾರ್ಥಿಗಳು ಉತ್ತೀರ್ಣ
200ಕ್ಕೆ 171 ಅಂಕಗಳನ್ನು ಪಡೆದ ಜೇಡನ್ ಕುವೆಲ್ಲೊ ಕಾರ್ಕಳ ತಾಲೂಕಿನಲ್ಲಿಯೇ ಅತ್ಯುತ್ತಮ ಸಾಧನೆ

ಭಾರತೀಯ ಕಂಪೆನಿ ಸೆಕ್ರೆಟರಿ ಮಂಡಳಿಯವರು ನಡೆಸಿದ ರಾಷ್ಟ್ರಮಟ್ಟದ ಕಂಪೆನಿ ಸೆಕ್ರೆಟರಿಯ ಪ್ರವೇಶ ಪರೀಕ್ಷೆ-2025(ಸಿಎಸ್‌ಇಇಟಿ)ಯಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜು 2025-26 ನೇ ಸಾಲಿನಲ್ಲಿ ಅಮೋಘ ಸಾಧನೆಯನ್ನು ದಾಖಲಿಸಿದೆ. ಒಟ್ಟು 11 ವಿದ್ಯಾರ್ಥಿಗಳು ಪ್ರಥಮ ಪ್ರಯತ್ನದಲ್ಲಿಯೇ ಉತ್ತೀರ್ಣರಾಗಿದ್ದಾರೆ. ಸಂಸ್ಥೆಯಿಂದ ಒಟ್ಟು 15 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅದರಲ್ಲಿ 11 ವಿದ್ಯಾರ್ಥಿಗಳು ಉತ್ತೀರ್ಣರಾಗುವುದರೊಂದಿಗೆ ಸಂಸ್ಥೆಯು ಅಭೂತಪೂರ್ವ ಸಾಧನೆಗೈದಿದೆ.

ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಜೇಡನ್ ಕುವೆಲ್ಲೊ 200ಕ್ಕೆ 171 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಕಾರ್ಕಳ ತಾಲೂಕಿನಲ್ಲಿಯೇ ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾನೆ. ಉಳಿದಂತೆ ದಿಶಾಂತ್(166/200), ಜಿತೇಶ್ ಪಿಂಟೊ (147/200), ಮೊಹಮ್ಮದ್ ಸುಬಾನ್ (144/200), ಪೂರ್ಣೇಶ್ವರಿ (141/200), ವೀಕ್ಷಿತ್ ಆಚಾರ್ಯ (131/200), ಸಿಯಾ ಕ್ಯಾರೊಲ್ ಡಿಕ್ರೂಸ್(123/200), ಮಹಿಪಾಲ್ ಸಿಂಗ್(119/200) ಸ್ವಸ್ತಿಕ್ ಎಸ್ ಪೂಜಾರಿ (118/200), ನಿರಾಲಿ ಜೈನ್ (100/200), ಶ್ರಾವ್ಯ (100/200) ಉತ್ತೀರ್ಣರಾದ ವಿದ್ಯಾರ್ಥಿಗಳಾಗಿದ್ದಾರೆ.

ಈ ಎಲ್ಲಾ ವಿದ್ಯಾರ್ಥಿಗಳು ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ಸಿಎ ಮತ್ತು ಸಿಎಸ್ ತರಬೇತಿ ತಂಡದಿಂದ ತರಬೇತಿಯನ್ನು ಪಡೆದುಕೊಂಡಿದ್ದರು. ಸಂಸ್ಥೆಯ ಆಡಳಿತ ಮಂಡಳಿಯವರು, ಪ್ರಾಚಾರ್ಯರು, ತರಬೇತಿ ನೀಡಿದ ಉಪನ್ಯಾಸಕ ತಂಡ ಹಾಗೂ ಸಂಸ್ಥೆಯ ಬೋಧಕವರ್ಗದವರು ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments