ಕಾರ್ಕಳದ ಕೆ.ಎಮ್.ಇ.ಎಸ್ ಸಂಸ್ಥೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಹೇಗೆ ಎದುರಿಸಬೇಕೆಂಬುವುದರ ಬಗ್ಗೆ ವಿವರಿಸುತ್ತಾ “ಇಂದಿನ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಮಂಡಳಿಯವರು ಮಾದರಿ ಪ್ರಶ್ನೆ ಪತ್ರಿಕೆಗಳನ್ನು ನೀಡುವ ಮೂಲಕ ಪರೀಕ್ಷಾ ತಯಾರಿ ನಡೆಸಲು ಸುಲಭವಾಗುವಂತೆ ಮಾಡಿದ್ದಾರೆ. ಅನೇಕ ಮಾಧ್ಯಮಗಳು ವಿದ್ಯಾರ್ಥಿಗಳಿಗೆ ಕಲಿಯಲು ಮಾರ್ಗದರ್ಶನವನ್ನು ನೀಡುವುದರಿಂದ ಮತ್ತು ಅಧ್ಯಾಪಕರು ನಿಸ್ವಾರ್ಥ ಸೇವೆಯನ್ನು ಮಾಡುವುದರಿಂದ ವಿದ್ಯಾರ್ಥಿಗಳಿಗೆ ಕಲಿಕೆ ಸುಲಭವಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದು ಸಂಸ್ಥೆಗೆ ಕೀರ್ತಿ ತರುವಂತಾಗಬೇಕು” ಎಂದು ಕನ್ನಡ ಸಾಹಿತ್ಯ ಪರಿಷತ್ ಕಾರ್ಕಳ ತಾಲೂಕಿನ ಅಧ್ಯಕ್ಷ ಪ್ರಭಾಕರ ಕೊಂಡಳ್ಳಿ ನುಡಿದರು.
ಹಲವಾರು ಕಥೆಗಳ ಮೂಲಕ ವಿದ್ಯಾರ್ಥಿಗಳ ಮನಸ್ಸನ್ನು ಗೆದ್ದು ವಿದ್ಯಾರ್ಥಿಗಳು ಪರೀಕ್ಷೆಯನ್ನು ಹೇಗೆ ಎದುರಿಸಬೇಕು ಎಂಬುದರ ಬಗ್ಗೆ ಮಾಹಿತಿ ನೀಡಿದರು.
ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿಯವರು ಸ್ಟಾಗತಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಕೆ.ಬಾಲಕೃಷ್ಣ ರಾವ್, ಪ್ರೈಮರಿ ವಿಭಾಗದ ಮುಖ್ಯಸ್ಥೆ ಲೊಲಿಟ ಡಿ’ಸಿಲ್ವ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರೌಢ ಶಿಕ್ಷಕಿ ಶೃತಿ ಅತಿಥಿಗಳಿಗೆ ಹೂ ಮತ್ತು ಸ್ಮರಣಿಕೆ ನೀಡಿ ಗೌರವಿಸಿದರು.
















