ಬಿ. ಜೆ. ಪಿ ನೇತೃತ್ವದ ಕೇಂದ್ರ ಸರ್ಕಾರವು ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGREGA)ಯ ಹೆಸರು ಮತ್ತು ಮೂಲ ಸ್ವರೂಪವನ್ನೇ ಬದಲಾಯಿಸಿ, ಕಾರ್ಮಿಕರ ಉದ್ಯೋಗದ ಹಕ್ಕನ್ನು ಕಸಿದು ಕೊಂಡಿದ್ದನ್ನು ಪ್ರತಿಭಟಿಸಿ ಮತ್ತು ಹಿಂದಿನ ಉದ್ಯೋಗ ಖಾತರಿ ಯೋಜನೆ ಯನ್ನು ಮರು ಜಾರಿ ಗೊಳಿಸುವಂತೆ ಆಗ್ರಹಿಸಿ, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ನಿರ್ದೇಶನದಂತೆ, ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ನಡೆಯಲಿರುವ “ಮನ್ ರೇಗಾ ಬಚಾವೋ ಸಂಗ್ರಾಮ್ ” ಆಂದೋಲನದ ಪ್ರಯುಕ್ತ, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ, ನಾಳೆ (ಜ.೩೧ ರಂದು) 10 ಗಂಟೆಗೆ ಗಾಂಧಿ ನಡಿಗೆ-ಪ್ರತಿಭಟನಾ ಪಾದಯತ್ರೆ ಯನ್ನು ಕಾಂಗ್ರೆಸ್ ಕಚೇರಿಯಿಂದ ತಾಲೂಕು ಕಚೇರಿಯವರೆಗೆ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ, ಕಾಂಗ್ರೆಸ್ ಪಕ್ಷದ ರಾಜ್ಯ, ಜಿಲ್ಲಾ ಮತ್ತು ಬ್ಲಾಕ್ ಸಮಿತಿಗಳ ಪದಾಧಿಕಾರಿಗಳು, ಪಕ್ಷದ ಮುಂಚೂಣಿ ಘಟಕಗಳ ಹಾಗೂ ಇತರೆ ಘಟಕ, ಸಮಿತಿ, ವಿಭಾಗಗಳ ಅಧ್ಯಕ್ಷರು ಪದಾಧಿಕಾರಿಗಳು, ವಿವಿಧ ಸ್ಥರದ ಸ್ಥಳೀಯಾಡಳಿತ ಸಂಸ್ಥೆಗಳ ಹಾಲಿ ಹಾಗೂ ಮಾಜಿ ಸದಸ್ಯರು, ವಿವಿಧ ಮಂಡಳಿ,ನಿಗಮ ,ಸಮಿತಿ ಪ್ರಾಧಿಕಾರ ಮತ್ತು ಧಾರ್ಮಿಕ ಸಂಸ್ಥೆಗಳಿಗೆ ಸರ್ಕಾರದಿಂದ ನಾಮನಿರ್ದೇಶನ ಗೊಂಡಿರುವ ಸದಸ್ಯರು, ಎಲ್ಲಾ ಗ್ರಾಮೀಣ ಕಾಂಗ್ರೆಸ್ , ಬೂತ್ ಸಮಿತಿಗಳ ಅಧ್ಯಕ್ಷರು,ಪದಾಧಿಕಾರಿಗಳು, ಬಿ. ಎಲ್. ಎ -2 ಗಳು ಮತ್ತು ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನಾ ಸಭೆಯನ್ನು ಯಶಸ್ವಿಗೊಳಿಸಿಕೊಡಬೇಕಾಗಿ, ಮತ್ತು ಈ ಮೂಲಕ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯ ವಿರುದ್ಧ ಧ್ವನಿ ಎತ್ತಬೇಕಾಗಿ ಕಾರ್ಕಳ ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮುನಿಯಾಲು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















