Saturday, February 7, 2026
Google search engine
Homeರಾಜ್ಯಬೈಂದೂರು ಕ್ಷೇತ್ರದ ಮಾಜಿ ಶಾಸಕ ಹಾಗೂ ಹಿರಿಯ ರಾಜಕಾರಣಿ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ

ಬೈಂದೂರು ಕ್ಷೇತ್ರದ ಮಾಜಿ ಶಾಸಕ ಹಾಗೂ ಹಿರಿಯ ರಾಜಕಾರಣಿ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ

ಬೈಂದೂರು ಕ್ಷೇತ್ರದ ಮಾಜಿ ಶಾಸಕ ಹಾಗೂ ಹಿರಿಯ ರಾಜಕಾರಣಿ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಇಂದು ವಿಧಿವಶರಾಗಿದ್ದಾರೆ. ಧಾರ್ಮಿಕ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಸಿದ್ದ ಅಪ್ಪಣ್ಣ ಹೆಗ್ಡೆ ಅವರು 91ನೇ ವಯಸ್ಸಿನಲ್ಲಿ ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದಿದ್ದಾರೆ.

ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು 1983 ರಿಂದ 1985ರ ವರೆಗೆ ಜನತಾ ಪಕ್ಷದಿಂದ ಬೈಂದೂರು ಕ್ಷೇತ್ರದ ಶಾಸಕರಾಗಿ ಕಾರ್ಯನಿರ್ವಹಿಸಿದ್ದರು. ತಮ್ಮ ರಾಜಕೀಯ ಜೀವನದಲ್ಲಿ ಜನಸಾಮಾನ್ಯರ ಸಮಸ್ಯೆಗಳಿಗೆ ಧ್ವನಿಯಾಗಿದ್ದ ಅವರು, ಪ್ರಾಮಾಣಿಕತೆ ಮತ್ತು ಸರಳತೆಯಿಂದ ಜನಮನ್ನಣೆ ಗಳಿಸಿದ್ದರು.

ಶಾಸಕರಾಗಿದ್ದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ ಅಪ್ಪಣ್ಣ ಹೆಗ್ಡೆ ಅವರು, ಧಾರ್ಮಿಕ ಕ್ಷೇತ್ರದಲ್ಲಿಯೂ ಪ್ರಮುಖ ಪಾತ್ರವಹಿಸಿದ್ದರು. ಸ್ಥಳೀಯ ಮಹಾಲಿಂಗೇಶ್ವರ ದೇವಸ್ಥಾನದ ಮುಖ್ಯಸ್ಥರಾಗಿ ಹಾಗೂ ಕೊಲ್ಲೂರು ಮೂಕಾಂಬಿಕಾ ದೇವಳದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

1960ರಿಂದ 1983ರವರೆಗೆ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಅವರು, ಆಡಳಿತದಲ್ಲಿ ಅಪಾರ ಅನುಭವ ಹೊಂದಿದ್ದರು. ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಅವರ ಸೇವೆ ಗಣನೀಯವಾಗಿದ್ದು, ಹಲವಾರು ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಮೃತರು ಇಬ್ಬರು ಪುತ್ರರು ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. ಬಸ್ರೂರು ಅಪ್ಪಣ್ಣ ಹೆಗ್ಡೆ ಅವರ ನಿಧನಕ್ಕೆ ಜಿಲ್ಲೆಯಾದ್ಯಂತ ರಾಜಕೀಯ, ಧಾರ್ಮಿಕ ಹಾಗೂ ಸಾಮಾಜಿಕ ವಲಯಗಳಲ್ಲಿ ಸಂತಾಪ ವ್ಯಕ್ತವಾಗುತ್ತಿದೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments