Thursday, February 26, 2026
Google search engine
Homeಕಾರ್ಕಳಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್

ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್

ಅಪ್ರಾಪ್ತೆಯ ಜೊತೆ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅನುಚಿತ ವರ್ತನೆ ತೋರಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಈ ಸಂಬಂಧ ಎಫ್‌ಐಆರ್‌ ದಾಖಲಾಗಿದೆ.

ಶಹಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ನೀಡಿದ ದೂರಿನ ಮೇರೆಗೆ ಶಹಾಪುರ ತಾಲ್ಲೂಕಿನ ಗೋಗಿ ಪೊಲೀಸ್ ಠಾಣೆಯಲ್ಲಿ‌ ಪೋಕ್ಸೋ ಪ್ರಕರಣ ದಾಖಲಾಗಿದೆ. ಹೀಗಾಗಿ ಮಲ್ಲಿಕಾರ್ಜುನ ಮುತ್ಯಾ ಯಾವುದೇ ಕ್ಷಣದಲ್ಲೂ ಅರೆಸ್ಟ್‌ ಆಗುವ ಸಾಧ್ಯತೆಗಳಿವೆ.

ಏನಿದು ಪ್ರಕರಣ?
ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ತೊಡೆ ಮೇಲೆ ಬಾಲಕಿ ಕೂರಿಸಿಕೊಂಡು ಅನುಚಿತ ವರ್ತನೆ ತೋರಿದ್ದಾರೆ ಎಂಬ ಆರೋಪ ಬಂದಿತ್ತು. ಮುತ್ಯಾನ ತೊಡೆಯ ಮೇಲೆ ಬಾಲಕಿ ಕುಳಿತುಕೊಂಡಿರುವ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಈ ಬೆನ್ನಲ್ಲೇ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ಶಶಿಧರ ಕೋಸಂಬೆ, ಕ್ರಮ ತೆಗೆದುಕೊಳ್ಳುವಂತೆ ಯಾದಗಿರಿ ಎಸ್ಪಿಗೆ ಪತ್ರ ಬರೆದಿದ್ದರು.

ಯಾದಗಿರಿ ಜಿಲ್ಲೆಯ ಶಹಾಪುರದ ಮಹಲ್ ರೋಜಾದ ಮಲ್ಲಿಕಾರ್ಜುನ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮುತ್ಯಾ ಎಂದೇ ಫೇಮಸ್‌ ಆಗಿದ್ದಾರೆ

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments