ಸರಕಾರಿ ಹಿರಿಯ ಪ್ರಾಥಮಿಕ ಶಾಲೆ (ಬೋರ್ಡ್ ಶಾಲೆ) ನಂದಳಿಕೆ- ಹಿರಿಯ ವಿದ್ಯಾರ್ಥಿಗಳ ವಾರ್ಷಿಕೋತ್ಸವ
ಕಾರ್ಕಳ:ನೂರು ವರ್ಷ ಪೂರೈಸಿ ಮುನ್ನಡೆಯುತ್ತಿರುವ ಬೋರ್ಡ್ ಶಾಲೆ ನಂದಳಿಕೆಯಲ್ಲಿ ಫೆ.28 ಶನಿವಾರದಂದು ಹಿರಿಯ ವಿದ್ಯಾರ್ಥಿಗಳ ವಾರ್ಷಿಕೋತ್ಸವ ನಡೆಯಲಿದೆ.
ಸಂಜೆ 6:00ಗಂಟೆಯಿಂದ ಸ್ಥಳೀಯ ಅಂಗನವಾಡಿ ಪುಟಾಣಿಗಳ ಹಾಗೂ ಶಾಲೆಯ ವಿದ್ಯಾರ್ಥಿಗಳಿಂದ ನೃತ್ಯ, 7 ಗಂಟೆ ಯಿಂದ ಸಭಾ ಕಾರ್ಯಕ್ರಮ ಬಳಿಕ ಹಿರಿಯ ವಿದ್ಯಾರ್ಥಿಗಳಿಂದ ನೃತ್ಯ ಸಿಂಚನ ಕಾರ್ಯಕ್ರಮ, 8:30ರಿಂದ ಹಿರಿಯ ವಿದ್ಯಾರ್ಥಿಗಳು ಮತ್ತು ಶಾಲೆಯ ವಿದ್ಯಾರ್ಥಿಗಳ ಕೂಡುವಿಕೆಯಿಂದ ಮಹಿಷ ಮರ್ದಿನಿ ಯಕ್ಷಗಾನ ಕಾರ್ಯಕ್ರಮ ನಡೆಯಲಿರುವುದು ಎಂದು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸುಭಾಷ್ ಕುಮಾರ್ ನಂದಳಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















