Monday, March 2, 2026
Google search engine
Homeಕರಾವಳಿಪುತ್ತೂರು: ದೇವಸ್ಥಾನದಲ್ಲಿ ಕುಣಿತ ಭಜನೆ ಮಾಡುತ್ತಿದ್ದ ಮಹಿಳೆ ಕುಸಿದು ಬಿದ್ದು ಸಾ*ವು

ಪುತ್ತೂರು: ದೇವಸ್ಥಾನದಲ್ಲಿ ಕುಣಿತ ಭಜನೆ ಮಾಡುತ್ತಿದ್ದ ಮಹಿಳೆ ಕುಸಿದು ಬಿದ್ದು ಸಾ*ವು

ದೇವಸ್ಥಾನದ ಜಾತ್ರೋತ್ಸವದ ವೇಳೆ ಕುಣಿತ ಭಜನೆ ಮಾಡುತ್ತಿದ್ದ ಮಹಿಳೆಯೊಬ್ಬರು ಕುಸಿದು ಬಿದ್ದು ಸಾವನಪ್ಪಿದ ಘಟನೆ ಪುತ್ತೂರಿನ ಈಶ್ವರಮಂಗಲ ಸಮೀಪ ನಡೆದಿದೆ.

ಮೃತರನ್ನು ಸುಳ್ಯಪದವು ಮಹಾಲಕ್ಷ್ಮಿ ವನಿತಾ ಭಜನ ಮಂಡಳಿಯ ಸದಸ್ಯೆ ರತ್ನಾವತಿ ಬಾಳಪ್ಪ ಪೂಜಾರಿ ಕನ್ನಡ್ಕ (63)ಎಂದು ಗುರ್ತಿಸಲಾಗಿದೆ.

ಕಾವು ಮುತ್ತು ಮಾರಿಯಮ್ಮ ದೇವಸ್ಥಾನದ ಜಾತ್ರೋತ್ಸವದಲ್ಲಿ ಸುಳ್ಯಪದವು ಮಹಾಲಕ್ಷ್ಮಿ ವನಿತಾ ಭಜನ ಮಂಡಳಿಯ ಕುಣಿತ ಭಜನೆ ಕಾರ್ಯಕ್ರಮದಲ್ಲಿ ರತ್ನಾವತಿ ಬಾಳಪ್ಪ ಪೂಜಾರಿ ಭಾಗವಹಿಸಿದ್ದರು. ಈ ವೇಳೆ ಅವರು ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಪುತ್ತೂರು ಆಸ್ಪತ್ರೆ ಕರೆದೊಯ್ಯಲಾಯಿತಾದರೂ, ದಾರಿ ಮಧ್ಯೆ ಮಹಿಳೆ ಮೃತಪಟ್ಟಿದ್ದಾರೆ. ಸಾವಿಗೆ ಹೃದಯಾಘಾತ ಕಾರಣ ಎಂದು ವೈದ್ಯರು ತಿಳಿಸಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments