ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡುವುದಿಲ್ಲ ಎಂದು ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ತಿಳಿಸಿದೆ.
ಈ ಬಗ್ಗೆ ಮಾಹಿತಿ ನೀಡಿದ ಟಿಬಿಟಿ ಅಧ್ಯಕ್ಷ ಕೆ.ಜಯಕುಮಾರ್ ಅವರು, “ಗರ್ಭ ಧರಿಸುವ ವಯಸ್ಸಿನ ಮಹಿಳೆಯರ ದೇವಾಲಯ ಪ್ರವೇಶ, ಪೂಜೆ ಸಲ್ಲಿಕೆಗೆ ಅವಕಾಶ ಕೊಟ್ಟಿರುವ ಸುಪ್ರೀಂ ಕೋರ್ಟ್ 2018ರ ತೀರ್ಪನ್ನು ವಿರೋಧಿಸಿ ನಿರ್ಣಯ ತೆಗೆದುಕೊಂಡಿದ್ದೇವೆ” ಎಂದು ತಿಳಿಸಿದರು.
“ಟಿಡಿಬಿಯು ಶಬರಿಮಲೆ ಪದ್ಧತಿ, ಸಂಪ್ರದಾಯ ಹಾಗೂ ನಂಬಿಕೆಗಳನ್ನು ಕಾಪಾಡಲು ಒತ್ತು ಕೊಡುತ್ತದೆ. ರಾಜ್ಯ ಸರ್ಕಾರವೂ ಇದನ್ನು ಎತ್ತಿಹಿಡಿಯಬೇಕು. 10-50 ವರ್ಷ ವಯಸ್ಸಿನ ಮಹಿಳೆಯರು ದೇವಾಲಯ ಪ್ರವೇಶಿಸುವುದನ್ನು ನಿಷೇಧಿಸುವ ಕ್ರಮವನ್ನು ಮುಂದುವರಿಸಲು ನಿರ್ಧರಿಸಿದೆ. ಈ ಬಗ್ಗೆ ತಮ್ಮ ನಿಲುವನ್ನು ಸುಪ್ರೀಂಗೂ ಹೇಳುತ್ತೇವೆ” ಎಂದು ಹೇಳಿದರು.












