Thursday, March 5, 2026
Google search engine
Homeಕಾರ್ಕಳಯುದ್ಧದ ಎಫೆಕ್ಟ್‌ – ವಾಣಿಜ್ಯ LPG ಸಿಲಿಂಡರ್‌ಗಳಿಗೆ ನೀಡಲಾಗಿದ್ದ ರಿಯಾಯಿತಿ ರದ್ದು

ಯುದ್ಧದ ಎಫೆಕ್ಟ್‌ – ವಾಣಿಜ್ಯ LPG ಸಿಲಿಂಡರ್‌ಗಳಿಗೆ ನೀಡಲಾಗಿದ್ದ ರಿಯಾಯಿತಿ ರದ್ದು

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಅನಿಲ ಪೂರೈಕೆ ಮೇಲೂ ಪರಿಣಾಮ ಬೀರಿದೆ. ಹೀಗಾಗಿ ವಾಣಿಜ್ಯ ಸಿಲಿಂಡರ್‌ಗಳಿಗೆ (Commercial LPG Cylinder) ನೀಡಲಾಗಿದ್ದ ರಿಯಾಯಿತಿಗಳನ್ನ ಸ್ಥಗಿತಗೊಳಿಸಿರುವುದಾಗಿ ಇಂಡಿಯನ್ ಆಯಿಲ್ ಪ್ರಕಟಣೆಯಲ್ಲಿ ತಿಳಿಸಿದೆ.
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನಿರ್ದೇಶನದ ಮೇರೆಗೆ 19 ಕೆಜಿ ಮತ್ತು 47 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಮೇಲಿನ ರಿಯಾಯಿತಿಗಳನ್ನ ರದ್ದುಗೊಳಿಸಿರುವುದಾಗಿ ಹೇಳಿದೆ.

ಮಧ್ಯಪ್ರಾಚ್ಯದಲ್ಲಿನ ಭೌಗೋಳಿಕ ಮತ್ತು ರಾಜಕೀಯ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು 19 ಕೆಜಿ ಮತ್ತು 47.5 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಪೂರೈಕೆಗೆ ವಿಸ್ತರಿಸಲಾಗಿದ್ದ ಎಲ್ಲಾ ರಿಯಾಯಿತಿಗಳನ್ನ ಮುಂದಿನ ಅಧಿಸೂಚನೆಯವರೆಗೆ ತಡೆಹಿಡಿಯಲಾಗಿದೆ. ಇಂಡಿಯನ್‌ ಆಯಿಲ್‌ ನಿರ್ದೇಶನದ ಮೇರೆಗೆ ಈ ನಿರ್ಧಾರ ಕೈಗೊಂಡಿರುವುದಾಗಿ ಇಂಡಿಯನ್ ಗ್ಯಾಸ್ ಡಿಸ್ಟ್ರಿಬ್ಯೂಟರ್ಸ್ ತಿಳಿಸಿದೆ.

ಸದ್ಯ ಬೆಂಗಳೂರಿನಲ್ಲಿ 19 ಕೆಜಿಯ ವಾಣಿಜ್ಯ ಸಿಲಿಂಡರ್‌ ದರ 1,814 ರೂಪಾಯಿ ಮತ್ತು 47.5 ಕೆಜಿ ಸಿಲಿಂಡರ್‌ 4,532 ರೂ.ಗಳಿಗೆ ಮಾರಾಟವಾಗುತ್ತಿದೆ. ಇಂಡಿಯನ್‌ ಆಯಿಲ್‌ ಪ್ರಧಾನ ಕಚೇರಿ ನಿರ್ಧಾರದಿಂದ ಹೋಟೆಲ್‌ಗಳು, ವಾಣಿಜ್ಯ ಬಳಕೆದಾರರಿಗೆ ದರ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments