Friday, March 13, 2026
Google search engine
Homeಕಾರ್ಕಳಶಿವಮೊಗ್ಗದಲ್ಲಿ ಅಪಘಾತ: ಕಾರ್ಕಳ ಮೂಲದ ವಿದ್ಯಾರ್ಥಿನಿ ಸಾವು

ಶಿವಮೊಗ್ಗದಲ್ಲಿ ಅಪಘಾತ: ಕಾರ್ಕಳ ಮೂಲದ ವಿದ್ಯಾರ್ಥಿನಿ ಸಾವು

ಮೆಗ್ಗಾನ್ ಜಿಲ್ಲಾಸ್ಪತ್ರೆ ಆವರಣದಲ್ಲಿ ವಾಟರ್‌ಟ್ಯಾಂಕರ್ ಹಾಗೂ ದ್ವಿಚಕ್ರ ವಾಹನ ಮಧ್ಯೆ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಅಂತಿಮ ವರ್ಷದ ಪಿಡಿಯಾಟ್ರಿಕ್ ಪಿಜಿ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ. ಕಾರ್ಕಳ ಮೂಲದ ಬೋಳ ಗ್ರಾಮದ ಸತೀಶ್- ಸುನೀತಾ ದಂಪತಿ ಪುತ್ರಿ ಲಾವಣ್ಯ(25) ಮೃತರು.

ದ್ವಿಚಕ್ರ ವಾಹನದಲ್ಲಿದ್ದ ಮತ್ತೊಬ್ಬ ವಿದ್ಯಾರ್ಥಿನಿ ಬೆಂಗಳೂರು ಜೆ.ಪಿ.ನಗರ ಮೂಲದ ಓವೇರಿಯಾ ಅವರಿಗೂ ಗಂಭೀರ ಗಾಯಗಳಾಗಿವೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಿಬ್ಬರು ಆಸ್ಪತ್ರೆಯಿಂದ ಹಾಸ್ಟೆಲ್‌ಗೆ ಹೋಗುವಾಗ ಆಸ್ಪತ್ರೆ ಆವರಣದಲ್ಲಿ ನಡೆಯುತ್ತಿರುವ ಕಟ್ಟಡ ಕಾಮಗಾರಿಗೆ ನೀರು ಪೂರೈಕೆ ಮಾಡುತ್ತಿದ್ದ ಟ್ಯಾಂಕರ್‌ಢಿಕ್ಕಿಯಾಗಿದೆ. ಪಶ್ಚಿಮ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments