Tuesday, March 17, 2026
Google search engine
Homeಕಾರ್ಕಳಶ್ರೀ ವೆಂಕಟರಮಣ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ

ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ

ಕಾರ್ಕಳ ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನ ವಾಣಿಜ್ಯ ಸಂಘ ಮತ್ತು ಆಳ್ವಾಸ್ ಇನ್ಸ್ಟಿಟ್ಯೂಟ್, ಮೂಡಬಿದ್ರೆ ಇವರ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮವನ್ನು ಆಳ್ವಾಸ್ ಎಂಬಿಎ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಸಮ್ಯಕ್ ಜೈನ್ ಮತ್ತು ಅಶೋಕ್‌ ನಡೆಸಿಕೊಟ್ಟರು. ಸಂದರ್ಶನಕ್ಕೆ ತಯಾರಿ, ಗುಂಪು ಚರ್ಚೆ, ತಂಡ ನಿರ್ವಹಣೆ ಮತ್ತು ಸಂದರ್ಶನಕ್ಕೆ ಹಾಜರಾಗುವ ಮೊದಲು ತಯಾರಿಯ ಮಹತ್ವ, ಆತ್ಮವಿಶ್ವಾಸ, ಸರಿಯಾದ ಸಂವಹನ ಸಂದರ್ಶನದಲ್ಲಿ ಯಶಸ್ಸು ಪಡೆಯಲು ಹೇಗೆೆ ಸಹಾಯವಾಗುತ್ತದೆ ಎಂಬ ಪ್ರಮುಖ ವಿಷಯಗಳ ಕುರಿತು ತರಬೇತಿಯನ್ನು ವಿದ್ಯ್ಯಾರ್ಥಿನಿಯರಿಗೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಗೀತಾ. ಜಿ ವಹಿಸಿದ್ದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಕು. ಅರ್ಪಿತಾ ಸ್ವಾಗತಿಸಿದರು, ವಿದ್ಯಾರ್ಥಿನಿಯರಾದ ಕು.ದೀಪ ಅಂತಿಮ ಬಿ.ಕಾಂ ವಂದಿಸಿ, ಕು. ಸಹನಾ ದ್ವಿತೀಯ ಬಿ.ಕಾಂ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments