Tuesday, March 17, 2026
Google search engine
Homeಕಾರ್ಕಳಮೂಡುಬಿದಿರೆ ಇನ್‌ಸ್ಪೆಕ್ಟರ್‌ ವಿರುದ್ಧ ಲೈಂಗಿಕ ಕಿರುಕುಳ ಆರೋಪ

ಮೂಡುಬಿದಿರೆ ಇನ್‌ಸ್ಪೆಕ್ಟರ್‌ ವಿರುದ್ಧ ಲೈಂಗಿಕ ಕಿರುಕುಳ ಆರೋಪ

ಮೂಡುಬಿದಿರೆ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ. ಅವರ ವಿರುದ್ದ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ.ಮೂವರು ಮಹಿಳೆಯರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ, ಗೃಹ ಸಚಿವರು, ಪೊಲೀಸ್ ಮಹಾನಿರ್ದೇಶ ಕರು, ಸರಕಾರದ ಮುಖ್ಯ ಕಾರ್ಯ ದರ್ಶಿ, ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿ ತನಿಖೆಗೆ ಆಗ್ರಹಿಸಿದ್ದಾರೆ.

ಎರಡು ವರ್ಷದ ಹಿಂದೆ ಪ್ರಕರಣ ಒಂದರಲ್ಲಿ ನನ್ನ ಗಂಡನನ್ನು ಬಂಧಿಸಲಾಗಿತ್ತು. ಅವರನ್ನು ಬಿಡುಗಡೆ ಗೊಳಿಸಲು ಲೈಂಗಿಕವಾಗಿ ಸಹಕರಿಸಬೇಕು ಎಂದು ಇನ್ ಸ್ಪೆಕ್ಟರ್‌ತಿಳಿಸಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಜತೆಗೆ 25 ಲಕ್ಷ ರೂ. ಹಣ ನೀಡುವಂತೆಯೂ ಬೇಡಿಕೆ ಇಟ್ಟಿದ್ದರು. ಗಂಡನ ವಿರುದ್ಧ ರೌಡಿ ಶೀಟ್ ತೆರೆಯುವುದಾಗಿಯೂ ಬೆದರಿಸಿದ್ದರು ಎಂದು ಒಬ್ಬ ಮಹಿಳೆ ದೂರಿನಲ್ಲಿ ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್‌ರೆಡ್ಡಿ ಅವರಿಗೆ ರಾಜ್ಯ ಮಹಿಳಾ ಆಯೋಗ ಪತ್ರ ಬರೆದಿದ್ದು ನಿಯಮಾನುಸಾರ ಪರಿಶೀಲಿಸಿ ಶಿಸ್ತು ಕ್ರಮ ಕೈಗೊಂಡು ವರದಿ ನೀಡುವಂತೆ ಪತ್ರದಲ್ಲಿ ತಿಳಿಸಿದೆ.
ತಿಳಿಸಲಾಗಿದೆ.

ಬೆಳ್ತಂಗಡಿ ಠಾಣೆಯಲ್ಲಿ ಇರುವಾಗಲೂ ಅದೇ ರೀತಿ ವರ್ತಿಸುತ್ತಿದ್ದರು. ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಆಗಿಲ್ಲ. ಹಾಗಾಗಿ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮಹಿಳೆಯರು ಆಗ್ರಹಿಸಿದ್ದರು.

ಇನ್‌ಸ್ಪೆಕ್ಟರ್ ವಿರುದ್ಧ ಬಂದ ದೂರುಗಳ ಆಧಾರದಲ್ಲಿ ಇಲಾಖೆ ತನಿಖೆ ಆರಂಭವಾಗಿದೆ. ಉತ್ತರ ಎಸಿಪಿ ನೇತೃತ್ವದಲ್ಲಿ ತನಿಖೆ ಆರಂಭಿ ಸಲಾಗಿದ್ದು ವರದಿ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ತಿಳಿಸಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments