Thursday, March 19, 2026
Google search engine
Homeಕಾರ್ಕಳಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ - ಆರೋಪಿ ವಶ

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ – ಆರೋಪಿ ವಶ

ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದಿದೆ. ಕೋಟೆಕಾರು ಪೋಸ್ಟ್ ನಿವಾಸಿ ಆಶೀಶ್ ಪೂಜಾರಿ (33) ಪ್ರಕರಣದ ಆರೋಪಿ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

9 ವರ್ಷದ ಬಾಲಕನನ್ನು ಹಣ ಹಾಗೂ ತಿಂಡಿ ನೀಡುವ ನೆಪದಲ್ಲಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಲಾಗಿದೆ. ಇದೇ ವೇಳೆ, ಬಾಲಕನಿಗೆ ಅಶ್ಲೀಲ ವಿಡಿಯೋ ತೋರಿಸಿ ಅಸಭ್ಯ ಕ್ರಿಯೆಗಳಿಗೆ ಪ್ರೇರೇಪಿಸಿರುವುದೂ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಈ ಸಂಬಂಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಆರೋಪಿಯಾಗಿ ಆಶೀಶ್ ಪೂಜಾರಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ತನಿಖೆ ಮುಂದುವರೆದಿದೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments