ಕಾರ್ಕಳ:ಸೇತುವೆಗಳ ನಿರ್ಮಾಣಕ್ಕೆ ರೂ. 04.50 ಕೋಟಿ ರೂಪಾಯಿ ಅನುದಾನ
ಧನ್ಯವಾದ ತಿಳಿಸಿದ ಉದಯ್ ಶೆಟ್ಟಿ ಮುನಿಯಾಲು
ಕಾರ್ಕಳ ವಿಧಾನ ಸಭಾ ಕ್ಷೇತ್ರದ ವ್ಯಾಫ್ತಿಯಲ್ಲಿ ಸೇತುವೆಗಳ ಮರು ನಿರ್ಮಾಣ ಕಾಮಗಾರಿಗಳಿಗೆ ಒಟ್ಟು 4.50 ಕೋಟಿ ರೂಪಾಯಿ ಅನುದಾನ ಸರ್ಕಾರದಿಂದ ಮಂಜೂರಾಗಿದೆ.
ಕಾರ್ಕಳ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ್ ಕುಮಾರ್ ಶೆಟ್ಟಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಉಡುಪಿ ಜಿಲ್ಲಾ ಉಸ್ತುವಾರಿಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ರವರಿಗೆ ಧನ್ಯವಾದ ಸಲ್ಲಿಸಿದ್ದಾರೆ.



















