ಸಾಣೂರಿನಲ್ಲಿ ಬೈಕ್ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ಮಾ. 18 ರಂದು ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಹರೀಶ್ ಸುವರ್ಣ ಎಂದು ಗುರುತಿಸಲಾಗಿದೆ. ಮೂಡಬಿದ್ರೆ ಕಡೆಯಿಂದ ಕಾರ್ಕಳ ಕಡೆಗೆ ವೇಗವಾಗಿ ಬರುತ್ತಿದ್ದ ಬೈಕ್ ಸವಾರ ಸುಕೇಶ್ ಎಂಬಾತ ಅಜಾರೂಕತೆಯಿಂದ ವೇಗವಾಗಿ ಬಂದು ಹರೀಶ್ ಸುವರ್ಣ ಎಂಬಾತರ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ರಸ್ತೆಗಪ್ಪಳಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಹರೀಶ್ ಸುವರ್ಣ ಅವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



















