Friday, March 20, 2026
Google search engine
Homeಕಾರ್ಕಳಪೊಲೀಸ್‌ ವಶದಲ್ಲಿದ್ದ ವ್ಯಕ್ತಿ ಸಾವು – ಗ್ರಾಮಸ್ಥರಿಂದ ಠಾಣೆಗೆ ಬೀಗ ಜಡಿದು ಪ್ರತಿಭಟನೆ

ಪೊಲೀಸ್‌ ವಶದಲ್ಲಿದ್ದ ವ್ಯಕ್ತಿ ಸಾವು – ಗ್ರಾಮಸ್ಥರಿಂದ ಠಾಣೆಗೆ ಬೀಗ ಜಡಿದು ಪ್ರತಿಭಟನೆ

ಪೊಲೀಸ್‌ ವಶದಲ್ಲಿದ್ದ ವ್ಯಕ್ತಿ ಸಾವನ್ನಪ್ಪಿದ ಘಟನೆ ತುಮಕೂರಿನ ಹುಳಿಯಾರು ಠಾಣೆಯಲ್ಲಿ ನಡೆದಿದೆ. ಪೊಲೀಸರ ಹಲ್ಲೆಯಿಂದ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಮೃತನನ್ನು ಕಾಂತರಾಜು (45) ಎಂದು ಗುರುತಿಸಲಾಗಿದೆ. ಇಸ್ಪೀಟ್ ಆಡ್ತಿದ್ದ 6 ಜನರನ್ನ ಪೊಲೀಸರು ಠಾಣೆಗೆ ಕರೆದುಕೊಂಡು ಬಂದಿದ್ದರು. ಈ ವೇಳೆ ಠಾಣೆಯಲ್ಲಿ ಕಾಂತರಾಜು ಸಾವನ್ನಪ್ಪಿದ್ದರು. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಹುಳಿಯಾರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ, ಠಾಣೆಗೆ ಬೀಗ ಜಡಿದು ಪ್ರತಿಭಟಿಸಿದ್ದಾರೆ.

ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಗ್ರಾಮಸ್ಥರಿಗೆ ಎಸ್‌ಪಿ ಅಶೋಕ್‌ ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈಬಿಟ್ಟಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments