ಕಾರ್ಕಳ: ಸ್ಕೂಟರನ್ನು ಅಜಾಗರೂಕತೆ ಹಾಗು ನಿರ್ಲಕ್ಷತನದಿಂದ ಸವಾರಿ ಮಾಡಿದ ಪರಿಣಾಮ ಸ್ಕೂಟರ್ ರಸ್ತೆ ಬದಿಯ ಗೋಡೆಗೆ ಡಿಕ್ಕಿ ಹೊಡೆದು ಸವಾರ ಮೃತ ಪಟ್ಟಿರುವ ಘಟನೆ ಕಾರ್ಕಳ ತಾಲೂಕಿನ ಕೆದಿಂಜೆ ಗ್ರಾಮದ ಮಾವಿನ ಕಟ್ಟೆಯ ಬಳಿ ಸಂಭವಿಸಿದೆ.
ಮೃತರನ್ನು ಹರಿಶ್ಚಂದ್ರ ಗುಡಿಗಾರ್(೬೨) ಎಂದು ಗುರುತಿಸಲಾಗಿದ್ದು, ಇವರು ನಂದಿಕೂರಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾಚ್ ಮ್ಯಾನ್ ಕೆಲಸ ಮಾಡುತ್ತಿದ್ದರು. ಗುರುವಾರದಂದು ಪಡುಬಿದ್ರೆ ಕಡೆಯಿಂದ ಕಾರ್ಕಳ ಕಡೆಗೆ ಚಲಿಸುವಾಗ ಕಾರ್ಕಳ ತಾಲೂಕಿನ ಕೆದಿಂಜೆ ಗ್ರಾಮದ ಮಾವಿನಕಟ್ಟೆ ಹತ್ತಿರ ಸ್ಕೂಟರ್ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಹರಿಶ್ಚಂದ್ರ ಗುಡಿಗಾರ್ ರವರು ಗಂಭೀರವಾಗಿ ಗಾಯಗೊಂಡಿದ್ದರು. ಇವರನ್ನು ಅಂಬುಲೆನ್ಸ್ ನಲ್ಲಿ ಕಾರ್ಕಳ ಡಾ. ಟಿ.ಎಂ.ಎ ಪೈ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



















