Sunday, March 22, 2026
Google search engine
Homeಕಾರ್ಕಳಮೂಡುಬಿದಿರೆ ಇನ್ ಸ್ಪೆಕ್ಟರ್ ವಿರುದ್ಧ ಅತ್ಯಾಚಾರ ಪ್ರಕರಣ...

ಮೂಡುಬಿದಿರೆ ಇನ್ ಸ್ಪೆಕ್ಟರ್ ವಿರುದ್ಧ ಅತ್ಯಾಚಾರ ಪ್ರಕರಣ…

ಮೂಡುಬಿದಿರೆ ಇನ್ ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಅವರ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ.

ಮಹಿಳೆಯರೊಂದಿಗೆ ಅಸಭ್ಯ ವರ್ತನೆ ತೋರಿದ ಆಡಿಯೊ-ವೀಡಿಯೊ ವೈರಲ್ ಆದ ಹಿನ್ನೆಲೆಯಲ್ಲಿ ಅಮಾನತುಗೊಂಡಿರುವ ಇನ್ ಸ್ಪೆಕ್ಟರ್ ಸಂದೇಶ್ ವಿರುದ್ಧ ಶಿಕ್ಷಕಿಯೊಬ್ಬರು ನೀಡಿರುವ ದೂರಿನಂತೆ ವೇಣೂರ ಠಾಣಾ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಮುಖ್ಯ ಶಿಕ್ಷಕಿಯಾಗಿದ್ದ ಮಹಿಳೆಯ ಮೇಲೆ 2018ರಿಂದ 2023ರ ನಡುವೆ ಮನೆಗೆ ಬಂದು ಇನ್ ಸ್ಪೆಕ್ಟರ್ ಸಂದೇಶ್ ಪಿ.ಜಿ. ಬಲವಂತವಾಗಿ ಅತ್ಯಾಚಾರ ಮಾಡಿದ್ದಾರೆ ಎಂದು ದೂರಿನಲ್ಲಿ ಆಪಾದಿಸಲಾಗಿದೆ. ಈ ಬಗ್ಗೆ ನೊಂದ ಮಹಿಳೆ ಮಾ.21ರಂದು ಸಂಜೆ ವೇಣೂರು ಠಾಣೆಗೆ ದೂರು ನೀಡಿದ್ದು, ಅದರಂತೆ ಪೊಲೀಸರು ಇನ್ ಸ್ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧ 376(2)(a)(1),376(2)(n),384,506 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments