Monday, March 23, 2026
Google search engine
Homeಕಾರ್ಕಳಅತ್ಯಂತ ದೀರ್ಘಾವಧಿಗೆ ಸರಕಾರದ ಮುಖ್ಯಸ್ಥರಾಗಿ ಇತಿಹಾಸ ಸೃಷ್ಟಿಸಿದ ಪ್ರಧಾನಿ ನರೇಂದ್ರ ಮೋದಿ

ಅತ್ಯಂತ ದೀರ್ಘಾವಧಿಗೆ ಸರಕಾರದ ಮುಖ್ಯಸ್ಥರಾಗಿ ಇತಿಹಾಸ ಸೃಷ್ಟಿಸಿದ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿಯವರು ರವಿವಾರ ಮಾಜಿ ಸಿಕ್ಕಿಂ ಮುಖ್ಯಮಂತ್ರಿ ಪವನ್ ಕುಮಾರ್ ಚಾಮ್ಲಿಂಗ್ ಅವರನ್ನು ಹಿಂದಿಕ್ಕಿ ಭಾರತದಲ್ಲಿ ಅತ್ಯಂತ ಸುದೀರ್ಘ ಕಾಲ ಆಡಳಿತ ನಡೆಸಿದ ಸರಕಾರದ ಮುಖ್ಯಸ್ಥರಾಗುವ ಮೂಲಕ ಇತಿಹಾಸವನ್ನು ಸೃಷ್ಟಿಸಿದ್ದಾರೆ.

ಗುಜರಾತಿನ ಮುಖ್ಯಮಂತ್ರಿಯಾಗಿ ಮತ್ತು ಭಾರತದ ಪ್ರಧಾನಿಯಾಗಿ ಒಟ್ಟು 8,931 ದಿನಗಳ ಕಾಲ ಸರಕಾರವನ್ನು ಮುನ್ನಡೆಸುವ ಮೂಲಕ ಮೋದಿಯವರು ಚಾಮ್ಲಿಂಗ್ ಅವರ 8,930 ದಿನಗಳ ದಾಖಲೆಯನ್ನು ಮುರಿದಿದ್ದಾರೆ.

ಮೋದಿ ಈ ಹಿಂದೆ ಅತ್ಯಂತ ದೀರ್ಘಕಾಲ ಗುಜರಾತಿನ ಮುಖ್ಯಮಂತ್ರಿಯಾಗಿದ್ದರು. ಮುಖ್ಯಮಂತ್ರಿಯಾಗಿ ಅತ್ಯಂತ ಸುದೀರ್ಘ ಅನುಭವ ಹೊಂದಿರುವ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಯನ್ನೂ ಅವರು ಹೊಂದಿದ್ದಾರೆ.

ಸ್ವಾತಂತ್ರ್ಯಾನಂತರ ಜನಿಸಿದ ಮೊದಲ ಪ್ರಧಾನಿಯಾಗಿರುವ ಮೋದಿ 2014, 2019 ಮತ್ತು 2024ರ ಮೂರು ಸತತ ಲೋಕಸಭಾ ಚುನಾವಣೆಗಳಲ್ಲಿ ತನ್ನ ಪಕ್ಷವನ್ನು ಗೆಲುವಿನತ್ತ ಮುನ್ನಡೆಸಿದ್ದಾರೆ.

ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಸರಕಾರದ ಮುಖ್ಯಸ್ಥನಾಗಿ ತನ್ನ ಅಧಿಕಾರಾವಧಿಯ 25ನೇ ವರ್ಷಕ್ಕೆ ಕಾಲಿರಿಸಿದ ಸಂದರ್ಭದಲ್ಲಿ ದೇಶದ ಜನತೆಗೆ ಧನ್ಯವಾದಗಳನ್ನು ಸಲ್ಲಿಸಿದ್ದ ಮೋದಿ 2001ರಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದಾಗಿನಿಂದ ತನ್ನ ಪಯಣವನ್ನು ಮೆಲುಕು ಹಾಕಿದ್ದರು.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments