Tuesday, March 24, 2026
Google search engine
Homeಕಾರ್ಕಳಮಾಳ:ಟಿಪ್ಪರ್ ಮತ್ತು ಸ್ಕೂಟರ್ ನಡುವೆ ಡಿಕ್ಕಿ ಡಿಡಿoಬಿರಿ ನಿವಾಸಿ ನವೀನ್ ಸ್ಥಳದಲ್ಲೇ ...

ಮಾಳ:ಟಿಪ್ಪರ್ ಮತ್ತು ಸ್ಕೂಟರ್ ನಡುವೆ ಡಿಕ್ಕಿ ಡಿಡಿoಬಿರಿ ನಿವಾಸಿ ನವೀನ್ ಸ್ಥಳದಲ್ಲೇ ಸಾವು

ಟಿಪ್ಪರ್ ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು ಸಹಸವಾರ ಗಂಭೀರ ಗಾಯಗೊಂಡ ಘಟನೆ ಇಂದು ಮುಂಜಾನೆ ಮಾಳ ಮುಳ್ಳೂರು ಬಳಿ ನಡೆದಿದೆ.

ಬಜಗೋಳಿ ಡಿಡಿoಬಿರಿ ನಿವಾಸಿ ನವೀನ್ ಮೃತರು.ಮೃತ ನವೀನ ರವರು ವೆಲ್ಡಿಂಗ್ ವೃತ್ತಿಯನ್ನು ಮಾಡುತ್ತಿದ್ದು ಹಾವು ಹಿಡಿಯುವ ಹವ್ಯಾಸ ಹೊಂದಿದ್ದರು. ನಿನ್ನೆ ಹಿಡಿದ ಎರಡು ಹಾವುಗಳನ್ನು ಹಿಡಿದುಕೊಂಡು ಕಾಡಿಗೆ ಬಿಡಲು ತೆರಳಿದ್ದರು. ಈ ಸಂದರ್ಭ ಈ ದುರ್ಘಟನೆ ನಡೆದಿದೆ.

ನವೀನರವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ತಂಡ, ಬಜಗೋಳಿ ಸ್ವಚ್ಛ ಬ್ರಿಗೇಡ್ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದು,ಹಲವು ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments