Wednesday, March 25, 2026
Google search engine
Homeಕಾರ್ಕಳಉಡುಪಿಯಲ್ಲಿ ಅತಿಯಾಯ್ತು ವಾಯು ಮಾಲಿನ್ಯ; ಉಸಿರಾಡೋದೂ ಕಷ್ಟ!

ಉಡುಪಿಯಲ್ಲಿ ಅತಿಯಾಯ್ತು ವಾಯು ಮಾಲಿನ್ಯ; ಉಸಿರಾಡೋದೂ ಕಷ್ಟ!

ಬೆಳಗಾವಿ, ಬೆಂಗಳೂರು ಸೇರಿ ಹಲವು ಕಡೆ ಏರ್ ಕ್ವಾಲಿಟಿ ಕುಸಿದಿದ್ದು, ಕಲಬುರ್ಗಿಯಲ್ಲಿ ತೀರಾ ಕಳಪೆ ಗಾಳಿಯ ಗುಣಮಟ್ಟ ಕಂಡುಬಂದಿದೆ. ಇದೆಲ್ಲದನ್ನೂ ಮೀರಿಸುವಂತೆ ಇಂದು ಉಡುಪಿಯ ಏರ್ ಕ್ವಾಲಿಟಿ ತೀರಾ ಹದಗೆಟ್ಟಿದ್ದು, ಉಸಿರಾಡಲು ಅನರ್ಹವೆಂದು ತಜ್ಞರು ಹೇಳುತ್ತಾರೆ. ಬೆಂಗಳೂರಿನ AQI ಅಪಾಯಕಾರಿ ಮಟ್ಟದಲ್ಲಿದ್ದು, ಇದರಿಂದ ಶ್ವಾಸಕೋಶ ಸಂಬಂಧಿ ಖಾಯಿಲೆಗಳು ಬರಲಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಏರ್ ಕ್ವಾಲಿಟಿಯಲ್ಲಿ ಏರುಪೇರಾಗುತ್ತಲೇ ಇದೆ. ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ. ಆದರೆ ಇಂದು ಉಡುಪಿಯ ಏರ್ ಕ್ವಾಲಿಟಿ ನೋಡಿದಾಗ ಆತಂಕ ಸೃಷ್ಟಿಯಾಗುವುದಂತೂ ನಿಜ. 100ರಿಂದ 150ರ ಒಳಗಿದ್ದ ಉಡುಪಿಯ AQI ಇಂದು ಒಮ್ಮೆಲೇ 200ರ ಗಡಿ ದಾಟಿರುವುದು ಆಶ್ಚರ್ಯವಾಗಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲೆಡೆ ಗಾಳಿಯ ಗುಣಮಟ್ಟ 150ಕ್ಕೂ ಕಡಿಮೆಯಿದೆ. ಆದರೆ ಉಡುಪಿಯಲ್ಲಿ ಗಾಳಿಯ ಗುಣಮಟ್ಟ 221ಕ್ಕೇರಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 146ಕ್ಕೆ ತಲುಪಿದೆ. ಕೆಲ ದಿನಗಳಿಂದ ಮಂಗಳೂರು ಸೇರಿದಂತೆ ಹಲವು ಜಿಲ್ಲೆಗಳ ಏರ್ ಕ್ವಾಲಿಟಿ ತೀರಾ ಕಳಪೆ ಮಟ್ಟಕ್ಕೆ ಇಳಿದಿದೆ. ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments