ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಸಂಬಂಧಿಸಿದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ.
ಅನುದಾನ ಮಂಜೂರು ಮಾಡಲಾಗಿದೆ.
ಜಿಲ್ಲಾಧಿಕಾರಿಗಳು ಮಾ.3 ರಂದು ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ ಹಿನ್ನೆಲೆಯಲ್ಲಿ ಈ ಪ್ರಸ್ತಾವನೆಗೆ ಸರ್ಕಾರ ಮಂಜೂರಾತಿ ನೀಡಿದೆ. 2026–27ನೇ ಸಾಲಿನ ಆಯವ್ಯಯದಲ್ಲಿ ಜೈನ, ಬೌದ್ ಬೌದ್ಧ ಮತ್ತು ಸಿಖ್ ಸಮುದಾಯ ಅಭಿವೃದ್ಧಿ ಯೋಜನೆಯಡಿ ಅನುದಾನ ಒದಗಿಸಲಾಗುತ್ತದೆ.
ಈ ಅನುದಾನದ ಮೂಲಕ ಅಲ್ಪಸಂಖ್ಯಾತರ ವಿದ್ಯಾರ್ಥಿನಿಲಯ ನಿರ್ಮಾಣ, ಕಾರ್ಕಳ ಗ್ರಾಮೀಣ ಪ್ರದೇಶದಲ್ಲಿರುವ ಅಜೆಕಾರು, ರಂಜಾಳ, ಮುಂಡ್ಲಿ, ಶಿರ್ಲಾಲು ಸೂಡಿ ಮತ್ತು ನಲ್ಲೂರು ಕೂಷ್ಮಾಂಡಿನಿ ಬಸದ
ಬಸದಿಗಳ ಸಂಪರ್ಕ ರಸ್ತೆ ಅಭಿವೃದ್ಧಿ ಕೈಗೊಳ್ಳಲಾಗುತ್ತದೆ. ಜೊತೆಗೆ ಜೈನ ಮಠದ ತ್ಯಾಗಿ ಭವನ, ಮಾತಾಜಿ ಭವನ ಹಾಗೂ ಸಭಾಂಗಣ ನವೀಕರಣ, ಗೊಮ್ಮಟೇಶ್ವರ ಬೆಟ್ಟಕ್ಕೆ ನೀರಿನ ಸರಬರಾಜು ಮತ್ತು ಕೊಳವೆಬಾವಿ ನಿರ್ಮಾಣ ಕೈಗೊಳ್ಳಲು ಉದ್ದೇಶಿಸಲಾಗಿದೆ.
ಈ ಯೋಜನೆಯನ್ನು ವಿಶೇಷ ಪ್ರಕರಣವಾಗಿ ಪರಿಗಣಿಸಿ, ಒಟ್ಟು ಅನುದಾನದ ಶೇ.75 ರಷ್ಟು ಮೊತ್ತವನ್ನು ಮೊದಲ ಕಂತಾಗಿ ಬಿಡುಗಡೆ ಮಾಡಲು ಸರ್ಕಾರ ಆದೇಶಿಸಿದೆ.



















