Tuesday, June 9, 2026
Google search engine
Homeಕಾರ್ಕಳಕಾರ್ಕಳ: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಯುವ ಉದ್ಯಮಿ ಚಿಕಿತ್ಸೆ ಫಲಿಸದೆ ಸಾವು

ಕಾರ್ಕಳ: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಯುವ ಉದ್ಯಮಿ ಚಿಕಿತ್ಸೆ ಫಲಿಸದೆ ಸಾವು

ಕಳೆದ ಕೆಲ ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಪಡೆಯುತ್ತಿದ್ದ ಬೆಳ್ತಂಗಡಿಯ ಮೂಲದ ಯುವ ಉದ್ಯಮಿ ಬಿ. ಸುದೀಪ್ ರೈ (36) ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿಯಾದ ಸುದೀಪ್ ರೈ, ಕಳೆದ ಕೆಲವು ವರ್ಷಗಳಿಂದ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕರ್ನೋಡಿಯಲ್ಲಿರುವ ತಮ್ಮ ಅಜ್ಜನ ಮನೆಯಲ್ಲಿ ವಾಸ್ತವ್ಯವಿದ್ದರು.

ಇವರು ಬೆಳ್ತಂಗಡಿಯಲ್ಲಿ ‘ಎಸ್‌ಆರ್‌ಎನ್ ಗ್ರೂಪ್’ ಹೆಸರಿನಲ್ಲಿ ಎಲೆಕ್ಟ್ರಾನಿಕ್ ಹಾಗೂ ಸೋಲಾರ್ ಉದ್ಯಮವನ್ನು ನಡೆಸುತ್ತಿದ್ದರು. ಎರಡು ತಿಂಗಳ ಹಿಂದೆ ಕಾರ್ಕಳ ಮೂಲದ ಯುವತಿಯನ್ನು ವಿವಾಹವಾಗಿದ್ದು ಪತ್ನಿ ಮನೆಯಲ್ಲಿಯೇ ತಿಂಡಿಯ ಜೊತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.

ತಕ್ಷಣವೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತಾದರೂ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.ಮೃತರ ತಂದೆ ದಾಮೋದರ ರೈ ಅವರು ನೀಡಿದ ದೂರಿನ ಮೇರೆಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments