Tuesday, March 31, 2026
Google search engine
Homeಕಾರ್ಕಳಮಾ. 31 - ಎ. 3: ಶ್ರೀ ಮುಖ್ಯಪ್ರಾಣ ಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಮಾ. 31 – ಎ. 3: ಶ್ರೀ ಮುಖ್ಯಪ್ರಾಣ ಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಸಾಂತ್ವಾನ ಮಂದಿರ ಟ್ರಸ್ಟ್ ಶ್ರೀ ದ್ವಾರಕಾಮಾಯಿ ಮಠದಲ್ಲಿ ಸಾಯಿ ಈಶ್ವರ್ ಗುರೂಜಿ ಮಾರ್ಗದರ್ಶನದಲ್ಲಿ 19 ಅಡಿ ಎತ್ತರದ ಕೃಷ್ಣಶಿಲೆಯ ಶ್ರೀ ಮುಖ್ಯಪ್ರಾಣ ದೇವರ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಮಾ. 31ರಿಂದ ಎ. 3ರ ವರೆಗೆ ಜರಗಲಿದೆ.

ಶ್ರೀಕ್ಷೇತ್ರದ ತಂತ್ರಿ ದೇವದಾಸ್ ತಂತ್ರಿ ಮುಂಬಯಿ ನೇತೃತ್ವದಲ್ಲಿ ಮಾ. 31ರಂದು ಮಧ್ಯಾಹ್ನ ಅನ್ನಪ್ರಸಾದ, ಸಂಜೆ 6ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಎ.1ರಂದು ಬೆಳಗ್ಗೆ 7ರಿಂದ ಗಣಪತಿ ಹೋಮ, ಶ್ರೀ ಮಹಾಗಣಪತಿ, ಅಯ್ಯಪ್ಪ ಸ್ವಾಮಿ, ಸುಬ್ರಹ್ಮಣ್ಯ ಸ್ವಾಮಿ, ದುರ್ಗಾದೇವಿಗೆ ನವಕಾಭಿಷೇಕ, ಮಧ್ಯಾಹ್ನ 12.30ಕ್ಕೆ ಅನ್ನಪ್ರಸಾದ, ಅನಾಥಾಶ್ರಮಗಳ ಮಕ್ಕಳಿಗೆ ಸತ್ಕಾರದ ಬಾಲಭೋಜನ, ಸಂಜೆ 6ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರಗಲಿವೆ.

ಎ. 2ರಂದು ಬೆಳಗ್ಗೆ 7ರಿಂದ ಶ್ರೀ ಮುಖ್ಯಪ್ರಾಣ ಶಿಲಾಮೂರ್ತಿ, ನಿತ್ಯಾನಂದ ಸ್ವಾಮಿಯ ಮೂರ್ತಿ ಪ್ರತಿಷ್ಠೆ ಬ್ರಹ್ಮಕಲಶಾಭಿಷೇಕ, ಮಹಾಪೂಜೆ, ಮಧ್ಯಾಹ್ನ 12.30ರಿಂದಮಹಾ ಅನ್ನಸಂತರ್ಪಣೆಜರಗಲಿದೆ. ಬೆಂಗಳೂರು ಸಿದ್ಧಿವಿನಾಯಕ ಶರಭೇಶ್ವರ ಪೀಠದ ಡಾ| ಮಹರ್ಷಿ ಜಯ ಶ್ರೀನಿವಾಸನ್ ಗುರೂಜಿ, ಶ್ರೀಕ್ಷೇತ್ರ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ, ಮಂಗಳೂರು ಶ್ರೀ ಆದಿಶಕ್ತಿ ಭುವನೇಶ್ವರಿ ಆದಿನಾಥ ಸಿದ್ದಿಪೀಠದ ಪ್ರವೀಣ್ ರಾಜ್ ಮಚ್ಚೇಂದ್ರನಾಥ ಉಪಸ್ಥಿತಿಯಲ್ಲಿ ಧರ್ಮ ಸಭೆ ನಡೆಯಲಿದೆ. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಯಶ್‌ಪಾಲ್ ಸುವರ್ಣ, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್ ಸಹಿತ ಗಣ್ಯರ ಉಪಸ್ಥಿತಿಯಲ್ಲಿ ಮುಂಬಯಿ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ದೀಪ ಪ್ರಜ್ವಲನೆ ಮಾಡಲಿದ್ದಾರೆ.

ಮಧ್ಯಾಹ್ನ 12.30ಕ್ಕೆ ಅನ್ನಪ್ರಸಾದ, ಸಂಜೆ 6ರಿಂದ ಶ್ರೀ ಎ. 3ರಂದು ಬೆಳಗ್ಗೆ 7ರಿಂದ ಹನುಮಯಾಗ, ಮುಖ್ಯಪ್ರಾಣ ಪ್ರತಿಷ್ಠಾಪನ ಸಮಿತಿ, ಶ್ರೀ ಸನಾತನ ಸೇವಾದಳ, ಕಾಲಭೈರವ ಸ್ವಾಮಿ ಬಲಿ ತರ್ಪಣ ಜರಗಲಿದೆ ಎಂದು ಶ್ರೀ ಶ್ರೀಕ್ಷೇತ್ರ ಆಡಳಿತ ಮಂಡಳಿ ಪ್ರಕಟನೆ ತಿಳಿಸಿದೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments