ಇತ್ತೀಚಿನ ದಿನಗಳಲ್ಲಿ ಶಿಕ್ಷಕರು ಬಹು ಸವಾಲುಗಳನ್ನು ಎದುರಿಸಬೇಕಾದ ಪರಿಸ್ಥಿತಿಯಿದೆ. ಇಂತಹ ಸವಾಲುಗಳ ನಡುವೆ ಹೊಂದಾಣಿಕೆಯೊಂದಿಗೆ ವೃತ್ತಿಯನ್ನು ನಿಭಾಯಿಸುವ ಅನಿವಾರ್ಯತೆಯಿದೆ ಎಂದು ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಚ್ ನಾಗರಾಜ್ ಶೆಟ್ಟಿಯವರು ಹೇಳಿದರು.
ಇವರು ಸಿಬಿಎಸ್ಇ ಬೋರ್ಡಿನ ಸೆಂಟರ್ ಆಫ್ ಎಕ್ಸಲೆನ್ಸಿ ಬೆಂಗಳೂರು ಮತ್ತು ಹೆಬ್ರಿಯ ಎಸ್.ಆರ್ ಪಬ್ಲಿಕ್ ಸ್ಕೂಲಿನ ಜಂಟಿ ಆಶ್ರಯದಲ್ಲಿ ನಡೆದ ಎರಡು ದಿನದ ತರಬೇತಿ ಕಾರ್ಯಕ್ರಮದ ಎರಡನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀ ಲಕ್ಷ್ಮೀ ಜನಾರ್ಧನ ಇಂಟರ್ನ್ಯಾಷನಲ್ ಸ್ಕೂಲ್ ಬೆಳ್ಮಣ್ ಇದರ ಪ್ರಾಂಶುಪಾಲರಾದ ಭುಜಂಗ ಪಿ ಶೆಟ್ಟಿ ಮತ್ತು ಮಾಧವ ಕೃಪಾ ಸ್ಕೂಲಿನ ಶಿಕ್ಷಕಿಯಾದ ಸುಪ್ರಿಯಾ ಎಸ್ ಶೆಟ್ಟಿ ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಎಸ್ ಆರ್ ಪಬ್ಲಿಕ್ ಸ್ಕೂಲಿನ ಪ್ರಾಂಶುಪಾಲರಾದ ಭಗವತಿ ಉಪಪ್ರಾಂಶುಪಾಲರಾದ ದೀಪಕ್ ಎನ್, ಕಾರ್ಯಕ್ರಮದ ಕೋಓರ್ಡಿನೇಟರ್ ಗೋಪಾಲಾಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ಎಸ್.ಆರ್. ಪಬ್ಲಿಕ್ ಸ್ಕೂಲಿನ ಹಾಗೂ ಉಡುಪಿ ಜಿಲ್ಲೆಯ ಬೇರೆ ಬೇರೆ ಸಿಬಿಎಸ್ಇ ಶಿಕ್ಷಣ ಸಂಸ್ಥೆಯ ನೋಂದಾಯಿತ 60 ಮಂದಿ ಶಿಕ್ಷಕರು ಭಾಗವಹಿಸಿದ್ದರು.
ಕಾರ್ಯಕ್ರಮವನ್ನು ಆಂಗ್ಲ ಭಾಷಾ ಶಿಕ್ಷಕಿಯರಾದ ಸುಪ್ರೀತಾ ನಿರೂಪಿಸಿ, ನಿವೇದಿತ ಸ್ವಾಗತಿಸಿ, ಶಕುಂತಲಾ ವಂದಿಸಿದರು.

















