Sunday, April 5, 2026
Google search engine
Homeಕಾರ್ಕಳಕ್ರಿಯೇಟಿವ್ ಸಂಸ್ಥೆಯ ಪ್ರಥಮ ಪಿಯು ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅವಕಾಶ

ಕ್ರಿಯೇಟಿವ್ ಸಂಸ್ಥೆಯ ಪ್ರಥಮ ಪಿಯು ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅವಕಾಶ

2026 -27ನೇ ಶೈಕ್ಷಣಿಕ ಸಾಲಿನ ಹತ್ತನೇ ತರಗತಿ ಪರೀಕ್ಷೆಯಲ್ಲಿ 90%ಕ್ಕಿಂತ ಅಧಿಕ ಅಂಕ ಗಳಿಸಿದ ಕಾರ್ಕಳದ ಸ್ಥಳೀಯ ವಿದ್ಯಾರ್ಥಿಗಳು ವಾಣಿಜ್ಯ ವಿಭಾಗವನ್ನು ಸೇರಬಯಸುವುದಾದರೆ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಹೊಂಗಿರಣ ಯೋಜನೆಯಡಿಯಲ್ಲಿ ವಿಶೇಷ ರಿಯಾಯಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೂ ಅವಕಾಶ ಕಲ್ಪಿಸಲಾಗಿದೆ.

ವಾಣಿಜ್ಯ ವಿಭಾಗದಲ್ಲಿ ಸಾನ್ವಿರಾವ್ ಎಂಬ ವಿದ್ಯಾರ್ಥಿನಿ 598 ಅಂಕಗಳನ್ನು ಗಳಿಸುವುದರ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಗುರುತಿಸಿಕೊಂಡಿರುವುದು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಹೆಗ್ಗಳಿಕೆಯಾಗಿದೆ.

ಸಿಎ ಫೌಂಡೇಶನ್ ನಲ್ಲಿ 58 ವಿದ್ಯಾರ್ಥಿಗಳಲ್ಲಿ 30 ವಿದ್ಯಾರ್ಥಿಗಳು ಅರ್ಹತೆಯನ್ನು ಗಳಿಸಿರುವುದಲ್ಲದೆ, CSEET ಪರೀಕ್ಷೆಯಲ್ಲಿ 98 ವಿದ್ಯಾರ್ಥಿಗಳಲ್ಲಿ 75 ವಿದ್ಯಾರ್ಥಿಗಳು ಪ್ರಥಮ ಪ್ರಯತ್ನದಲ್ಲೇ ಅರ್ಹತೆಯನ್ನು ಪಡೆದುಕೊಂಡಿರುವುದು ವಾಣಿಜ್ಯ ವಿಭಾಗದ ಗುಣಾತ್ಮಕ ಶಿಕ್ಷಣಕ್ಕೆ ಹಿಡಿದ ಕೈಗನ್ನಡಿಯಾಗಿದೆ.

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನೀಡುವ ಈ ಉಚಿತ ಶಿಕ್ಷಣ ಸೌಲಭ್ಯವನ್ನು ಅರ್ಹ ಫಲಾನುಭವಿಗಳು ಪಡೆದುಕೊಳ್ಳುವಂತೆ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments