ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಇಂದು ಅಪರಾಹ್ನ 3 ಗಂಟೆಗೆ ವೆಬ್ ಸೈಟ್, ಮೊಬೈಲ್ ಆ್ಯಪ್‌ನಲ್ಲಿ ಪ್ರಕಟಿಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.
ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು https://karresults.nic.in ಮತ್ತು ‘ಕರ್ನಾಟಕ ಒನ್’ ಮೊಬೈಲ್ ಆ್ಯಪ್ ಮೂಲಕವೂ ಪಡೆಯಬಹುದು. ಅಲ್ಲದೆ ವಿದ್ಯಾರ್ಥಿ ಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸ್ ಆ್ಯಪ್/ಎಸ್‌ಎಂಎಸ್ ಮೂಲಕವೂ ಫಲಿತಾಂಶ ಮಾಹಿತಿ ರವಾನೆಯಾಗಲಿದೆ.
ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟನೆ ವೇಳೆಯೇ ಅಂಕಪಟ್ಟಿಗಳನ್ನು ಡಿಜಿಲಾಕರ್ ನಲ್ಲಿ ಅಪ್ ಲೋಡ್ ಮಾಡಲಾಗುತ್ತದೆ. https://www.digilocker.gov.in ಗಳು ತಮ್ಮ ಅಂಕಪಟ್ಟಿ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಮಂಡಳಿ ಮಾಹಿತಿ ನೀಡಿದೆ.
ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ https://tinyurl.com/ಯಾವ ರೀತಿ ಡೌನ್ ಲೋಡ್ ಮಾಡಿಕೊಳ್ಳಬೇಕು mw84wmh9 ನಲ್ಲಿ ತಿಳಿದುಕೊಳ್ಳಬಹುದು. ರಾಜ್ಯದ ಎಲ್ಲ ಪಿಯು ಕಾಲೇಜುಗಳಿಗೆ ತಮ್ಮ ವಿದ್ಯಾರ್ಥಿಗಳ ಫಲಿತಾಂಶದ ಪಟ್ಟಿ ಗುರುವಾರ ಅಪರಾಹ್ನ 3 ಗಂಟೆಗೆ ಲಭ್ಯವಾಗಲಿದೆ ಎಂದು ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.
ಸಂಜೆ 6.15ಕ್ಕೆ ಪರೀಕ್ಷಾ ಮಂಡಳಿಯಲ್ಲಿ ಫಲಿ ತಾಂಶದ ಸಮಗ್ರ ಮಾಹಿತಿಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಲಿದ್ದಾರೆ.



















