ಸರಕಾರಿ ಪದವಿಪೂರ್ವ ಕಾಲೇಜು ಬೈಲೂರು ಇಲ್ಲಿನ ವಿದ್ಯಾರ್ಥಿಗಳು 2026ರ ಮಾರ್ಚಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಯನ್ನು ಮಾಡಿದ್ದಾರೆ
ಪರೀಕ್ಷೆಗೆ ಹಾಜರಾದ 148 ವಿದ್ಯಾರ್ಥಿಗಳಲ್ಲಿ 42 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 73 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ
13 ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ ನೂರಕ್ಕೆ ನೂರು ಅಂಕಗಳನ್ನು ದಾಖಲಿಸುವ ಮೂಲಕ ಶೇಕಡ 97.3 ಫಲಿತಾಂಶವನ್ನು ದಾಖಲಿಸಿ ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ
ವಿದ್ಯಾರ್ಥಿಗಳಿಗೆ ಸಂಸ್ಥೆಯ ಪ್ರಾಂಶುಪಾಲರು ಮತ್ತು ಉಪನ್ಯಾಸಕರಿಗೆ ಹಾಗೂ ಪೋಷಕರುಗಳಿಗೆ ಕಾಲೇಜು ಅಭಿವೃದ್ಧಿ ಸಮಿತಿಯು ಅಭಿನಂದನೆಯನ್ನು ಸಲ್ಲಿಸಿದೆ



















