Tuesday, April 14, 2026
Google search engine
Homeಕಾರ್ಕಳಏ.11 ರಂದು ನಡೆದ ನಿಟ್ಟೆ ತಾಂತ್ರಿಕ ಕಾಲೇಜಿನ ವಾರ್ಷಿಕೋತ್ಸವ

ಏ.11 ರಂದು ನಡೆದ ನಿಟ್ಟೆ ತಾಂತ್ರಿಕ ಕಾಲೇಜಿನ ವಾರ್ಷಿಕೋತ್ಸವ

ನಿಟ್ಟೆ (ಡೀಮ್ಡ್ ಟು ಬಿ ಯೂನಿವರ್ಸಿಟಿ) ಯ ಅಂಗಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ತನ್ನವಾರ್ಷಿಕೋತ್ಸವವನ್ನು ಏಪ್ರಿಲ್ ೧೧ ರಂದು ನಿಟ್ಟೆಯ ಬಿ ಸಿ ಆಳ್ವಾ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಬಹಳ ಉತ್ಸಾಹದಿಂದ ಆಚರಿಸಿತು.

ಟೊಯೊಟಾ ಇಂಡಸ್ಟ್ರೀಸ್ ಇಂಜಿನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನ ಮಾನವ ಸಂಪನ್ಮೂಲ ಉಪಾಧ್ಯಕ್ಷ ಸಂತೋಷ್ ರಾವ್ ಕೆ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ತಮ್ಮ ಭಾಷಣದಲ್ಲಿ, ಕಾರ್ಪೊರೇಟ್ ಪ್ರಪಂಚದಲ್ಲಿ ಉದಯಿಸುತ್ತಿರುವ ಬೇಡಿಕೆಗಳನ್ನು ಪೂರೈಸಲು ವಿದ್ಯಾರ್ಥಿಗಳಲ್ಲಿ ಉದ್ಯಮದ ಸಿದ್ಧತೆ, ಕೌಶಲ್ಯ ಅಭಿವೃದ್ಧಿಯ ಮಹತ್ವವನ್ನು ತಿಳಿಹೇಳಿದರು.

ಈ ಕಾರ್ಯಕ್ರಮದಲ್ಲಿ ಅತ್ಯುತ್ತಮ ಶೈಕ್ಷಣಿಕ ಸಾಧನೆಯನ್ನು ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸಲಾಯಿತು. ವಿದ್ಯಾರ್ಥಿ ಪಟ್ಟಿಯನ್ನು ಡಾ.ಶ್ರೀನಿವಾಸ ಪೈ ಪಿ, ಡೆಪ್ಯೂಟಿ ಡೀನ್ ಎಕಾಡೆಮಿಕ್ಸ್ ವಾಚಿಸಿದರು. ಪ್ರತಿಷ್ಠಿತ ಶ್ರೀ ಸಂಜೀತ್ ಶೆಟ್ಟಿ ಪ್ರಶಸ್ತಿ ವಿಜೇತರ ಪಟ್ಟಿಯನ್ನು ವಿವೇಕ್ ವಿಶ್ವನಾಥನ್ ವಾಚಿಸಿದರು.
ಗೌರವ ಅತಿಥಿ ಡಾ. ಗೋಪಾಲ್ ಮುಗೇರಾಯ ಅವರು ಸಭಿಕರನ್ನುದ್ದೇಶಿಸಿ ಮಾತನಾಡಿ ಶೈಕ್ಷಣಿಕ ಬೆಳವಣಿಗೆ ಮತ್ತು ವೃತ್ತಿಪರ ಅಭಿವೃದ್ಧಿಯ ಬಗ್ಗೆ ಒಳನೋಟಗಳನ್ನು ಹಂಚಿಕೊಂಡರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಿಟ್ಟೆ (ಡೀಮ್ಡ್ ಟು ಬಿ ಯೂನಿವರ್ಸಿಟಿ) ಕುಲಪತಿ ಡಾ.ಎಂ.ಎಸ್.ಮೂಡಿತ್ತಾಯ ಅವರು ಅಧ್ಯಕ್ಷೀಯ ಮಾತುಗಳಲ್ಲಿ ಸಂಸ್ಥೆಯ ಪ್ರಗತಿಯನ್ನು ಶ್ಲಾಘಿಸಿದರು ಮತ್ತು ಉತ್ಕೃಷ್ಟತೆಗಾಗಿ ಶ್ರಮಿಸಲು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.

ಸಂಸ್ಥೆಯ ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಲುಂಕರ್ ಅವರು ಸ್ವಾಗತಿಸಿ, ವಾರ್ಷಿಕ ಕಾಲೇಜು ವರದಿಯನ್ನು ಪ್ರಸ್ತುತಪಡಿಸಿದರು. ಕಳೆದ ಒಂದು ವರ್ಷದಲ್ಲಿ ಸಂಸ್ಥೆಯ ಶೈಕ್ಷಣಿಕ ಸಾಧನೆಗಳು, ಸಂಶೋಧನಾ ಮೈಲಿಗಲ್ಲುಗಳು ಮತ್ತು ಸಹಪಠ್ಯ ಸಾಧನೆಗಳನ್ನು ಈ ವರದಿ ವಿವರಿಸಿತು. ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗದ ಡೀನ್ ಡಾ. ನರಸಿಂಹ ಕೆ. ಬೈಲ್ಕೇರಿ ವಂದಿಸಿದರು.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments