ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಂಸ್ಥೆಯ ಪದವಿಪೂರ್ವ ವಿಭಾಗದ ಉಪಪ್ರಾಚಾರ್ಯ ಡಾ.ಪ್ರಕಾಶ್ ಭಟ್ ಅವರು ಮುಖ್ಯ ಅತಿಥಿಗಳಾಗಿದ್ದರು. ಅವರು ಮಾತನಾಡಿ ಅಂಬೇಡ್ಕರ್ ಶಿಕ್ಷಣಕ್ಕೆ ಬಹಳ ಪಾಮುಖ್ಯತೆ ನೀಡಿದ್ದರು. ಶಿಕ್ಷಣವೇ ನಮ್ಮ ನಿಜವಾದ ಶಕ್ತಿ ಎಂದು ಸಾರಿದವರು ಅಂಬೇಡ್ಕರ್. ಆದ್ದರಿಂದ ವಿದ್ಯಾರ್ಥಿಗಳು ಅಂಬೇಡ್ಕರ್ ಅವರ ಜೀವನಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸುಶಿಕ್ಷತರಾಗಬೇಕು.
ಈ ದೇಶದಲ್ಲಿರುವ ಅಸಮಾನತೆ, ಬಡತನ ನೀಗಿಸಲು ವಿದ್ಯಾರ್ಥಿಗಳು ಶ್ರಮಪಟ್ಟಾಗ ಅಂಬೇಡ್ಕರ್ ಅಂತವರು ಮಾಡಿದ ದೇಶ ಸೇವೆ ಸಾರ್ಥಕವಾಗುತ್ತದೆ” ಎಂದು ಹೇಳಿದರು. ಸಂಸ್ಥೆಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಜಯಲಕ್ಷಿ ಕಾರ್ಯಕ್ರಮದ ಆಧ್ಯಕ್ಷತೆ ವಹಿಸಿದ್ದರು. ಸಹ ಶಿಕ್ಷಕಿ ಶ್ರೀಮತಿ ಆ್ಯಲಿಸ್ ಲೋಬೋ ಅವರು ಅಂಬೇಡ್ಕರ್ ಕುರಿತು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಅತಿಥಿಗಳು ಹಾಗೂ ಸಂಸ್ಥೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಗೌರವ ಸಲ್ಲಿಸಿದರು. ಸಂಸ್ಥೆಯ ಪ್ರಾಥಮಿಕ ವಿಭಾಗದ ಸಹ ಶಿಕ್ಷಕಿಯಾದ ಕು. ಜೆಸ್ಲಿನ್ ಕಾರ್ಯಕ್ರಮ ನಿರೂಪಿಸಿದರು.


















