ಹೆಬ್ರಿಯ ಎಸ್.ಆರ್ ಪಬ್ಲಿಕ್ ಸ್ಕೂಲ್ನ ಸಿ.ಬಿ.ಎಸ್.ಇ ವಿಭಾಗವು 2026ನೇ ಸಾಲಿನ ಹತ್ತನೇ ತರಗತಿಯಲ್ಲಿ 100% ಫಲಿತಾಂಶವನ್ನು ದಾಖಲಿಸಿಕೊಂಡು ಸತತ 16 ವರ್ಷದಲ್ಲಿಯೂ 100% ಫಲಿತಾಂಶವನ್ನು ದಾಖಲಿಸಿಕೊಂಡಿದೆ.
ಈ ಬಾರಿಯ ಫಲಿತಾಂಶದಲ್ಲಿ ಧ್ವನಿ ಪಡುಕುಡೂರು 476/500 (95.20%) ಅಂಕ ಪಡೆದು ಪ್ರಥಮ ಸ್ಥಾನ, ಪ್ರೀತಮ್ ಗೌಡ ಕೆ.ಸಿ ಶಿವಮೊಗ್ಗ 467/500 (93.40%) ಅಂಕ ಪಡೆದು ದ್ವಿತೀಯ ಸ್ಥಾನ, ಸಮರ್ಥ್ ಎ ಜಾಧವ್ ಬೆಂಗಳೂರು 463/500(92.60%) ಅಂಕ ಪಡೆದು ತೃತೀಯ ಸ್ಥಾನವನ್ನು ಪಡೆದಿದ್ದಾರೆ. ಪರೀಕ್ಷೆಗೆ ಹಾಜರಾದ ಒಟ್ಟು130 ವಿದ್ಯಾರ್ಥಿಗಳಲ್ಲಿ, 57 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 48 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಪಡೆದಿದ್ದಾರೆ.
ಸಾಧಕ ವಿದ್ಯಾರ್ಥಿಗಳನ್ನು ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಚ್.ನಾಗರಾಜ ಶೆಟ್ಟಿ, ಕಾರ್ಯದರ್ಶಿಯವರಾದ ಸ್ವಪ್ನಾ ಎನ್ ಶೆಟ್ಟಿ ಅಭಿನಂದಿಸಿದ್ದಾರೆ.


















