ಧರ್ಮಸ್ಥಳ ದೇವರ ದರ್ಶನ ಸಮಯದಲ್ಲಿ ಬದಲಾವಣೆ
ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.
ವಿಷು ಜಾತ್ರೆ ಪ್ರಯುಕ್ತ ನಡೆಯುವ ವಿಶೇಷ ಪೂಜಾ ಕಾರ್ಯಕ್ರಮಗಳ ಹಿನ್ನೆಲೆ, ಇಂದಿನಿಂದ ಏಪ್ರಿಲ್ 22ರವರೆಗೆ ಸಮಯ ಬದಲಾವಣೆ ಮಾಡಿರುವುದಾಗಿ ಆಡಳಿತ ಮಂಡಳಿ ತಿಳಿಸಿದೆ.
ಬೆಳಗ್ಗೆ 8:30ರ ಬಳಿಕ ಮಾತ್ರ ದೇವರ ದರ್ಶನಕ್ಕೆ ಅವಕಾಶ ಇರುತ್ತದೆ. ರಾತ್ರಿ 8 ಗಂಟೆಯ ನಂತರ ದೇವಸ್ಥಾನದ ಹೊರಾಂಗಣದಿಂದ ಮಾತ್ರ ದರ್ಶನಕ್ಕೆ ಅವಕಾಶವಿದೆ. ಭಕ್ತಾದಿಗಳು ಸಹಕರಿಸಬೇಕು ಎಂದು ಮಂಡಳಿ ವಿನಂತಿಸಿದೆ.



















