ಇಂದು (ಏಪ್ರಿಲ್ 23, 2026) ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದಾರೆ.
ಈ ಬಾರಿ ಸುಮಾರು 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 8 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ಪರೀಕ್ಷೆ ನಡೆದಿತ್ತು. ರಾಜ್ಯಾದ್ಯಂತ 2,871 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಈ ವರ್ಷ ಪ್ರಥಮ ಬಾರಿಗೆ ವಿದ್ಯಾರ್ಥಿಗಳ ಅಂಕಪಟ್ಟಿ ಡಿಜಿ ಲಾಕರ್‌ನಲ್ಲಿ ಲಭ್ಯವಿದೆ. ಮಧ್ಯಾಹ್ನ 12 ಗಂಟೆ ನಂತರ ಅಂಕಪಟ್ಟಿ ಡೌನ್‌ಲೋಡ್ ಮಾಡಿಕೊಳ್ಳಬಹುದು. https://www.digilocker.gov.in ನಲ್ಲಿ ಅಂಕಪಟ್ಟಿ ಡೌನ್‌ಲೋಡ್ ಮಾಡಿಕೊಳ್ಳಬಹುದು. https://karresults.nic.in ನಲ್ಲಿ ಫಲಿತಾಂಶ ಲಭ್ಯವಿರಲಿದೆ. Karnatakaone ಮೊಬೈಲ್ ಆಪ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ.




















