2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿಯೂ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಹಾಗೂ ಉಡುಪಿ ಜಿಲ್ಲೆ ದ್ವಿತೀಯ ಪಡೆದುಕೊಂಡಿದೆ.
ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಶೇ.94.10 ಫಲಿತಾಂಶ ಬಂದಿದ್ದು, 98.40% ಉತ್ತೀರ್ಣ ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಕಳೆದ ಬಾರಿ 94.41% ಫಲಿತಾಂಶ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿತ್ತು
ಇನ್ನೂ ಕಳೆದ ಬಾರಿ 93.94% ಫಲಿತಾಂಶ ಪಡೆದಿದ್ದ ಉಡುಪಿ ಜಿಲ್ಲೆ ಈ ಬಾರಿ 98.18% ಪಡೆದು ರಾಜ್ಯಕ್ಕೆ 2ನೇ ಸ್ಥಾನ ಪಡೆದರೇ, 98.09% ಫಲಿತಾಂಶ ಪಡೆದ ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನ ಪಡೆದುಕೊಂಡಿದೆ. 2024-2025 ರಲ್ಲಿ 56.89 ಫಲಿತಾಂಶ ಪಡೆದಿದ್ದ ಕಲಬುರಗಿ ಈ ಬಾರಿ 85.06% ಫಲಿತಾಂಶದೊಂದಿಗೆ ಕೊನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.




















